ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
ಆನೇಕಲ್: ತಾಲೂಕಿನ ಒಕ್ಕಲಿಗ ಸಮುದಾಯದ ಎಸ್ಎಸ್ಎಲ್ಸಿ ಹಾಗೂ 2ನೇ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹ ಧನ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಅಂಕ ಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕೆಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಮನವಿ ಮಾಡಿದ್ದಾರೆ.ಅವರು ಆನೇಕಲ್ ತಾಲೂಕು ಒಕ್ಕಲಿಗರ ಸೇವಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ ಜನಾಂಗ ಬಂಧುಗಳು ತಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಹುದಾದ ಅವಕಾಶಗಳಿದ್ದು ಎಲ್ಲರೂ ರಾಜ್ಯ ಮಟ್ಟದ ಪುರಸ್ಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ವೈಯುಕ್ತಿಕ ವಿವರದ ಮಾಹಿತಿ ಉಳ್ಳ ಅರ್ಜಿಯನ್ನು ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಒಕ್ಕೂಟ, ನ. 133-1, ಶೋಭಾ ಟವರ್, ಗಾಂಧಿ ಬಜಾರ್ ವೃತ್ತ, ಬೆಂಗಳೂರು-560004 ಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.99865 48536, 98456 40705 ಇಲ್ಲಿಗೆ ಸಂಪರ್ಕಿಸಬಹುದು.
ಶಿಶು ಶವ ಪತ್ತೆ
ಮಾಗಡಿ: ತಾಲೂಕಿನ ಕೊಂಡಹಳ್ಳಿ ಗೇಟ್ ಬಳಿ ಶನಿವಾರ ಬೆಳಿಗ್ಗೆ ನವಜಾತ ಶಿಶು ಶವ ಪತ್ತೆಯಾಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕಣ್ಣು ಬಿಡುವ ಮುನ್ನವೇ ಹೆತ್ತ ಕುಡಿಯನ್ನೇ ತಾಯಿಯೊಬ್ಬಳು ಬೀದಿಗೆ ಎಸೆದು ಹೋಗಿದ್ದಾಳೆ. ಸತ್ತ ನವಜಾತ ಶಿಶುವನ್ನು ಕಂಡ ದಾರಿ ಹೋಕರು, ಕೂಡಲೆ ಪೊಲೀಸ್ ಠಾಣೆಗೆ ವಿಷಯ ಮುಟ್ಟಿದ್ದಾರೆ. ಕೂಡಲೆ ಕಾರ್ಯಪ್ರವೃತ್ತರಾದ ಎಸ್ಐ ಧರ್ಮೇಗೌಡ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ತಂದು ಶವಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

