ಬೆಂಗಳೂರು ಗ್ರಾಮಾಂತರ

ಹೊಸಕೋಟೆ ಕ್ಷೇತ್ರದ ಪ್ರಗತಿಗೆ ದುಡಿಯುವೆ: ಶಾಸಕ ನಾಗರಾಜ್

Published On :

ಸೂಲಿಬೆಲೆ: ಹೊಸಕೋಟೆ ಕ್ಷೇತ್ರದ ಪ್ರಗತಿಗೆ ಶಕ್ತಿ ಮೀರಿ ದುಡಿಯುತ್ತೇನೆ. ಕಾರ್ಯಕರ್ತರ ಸಹಕಾರ ಮತ್ತು ಮತದಾರರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದು, ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಂಟಿಬಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೂಲಿಬೆಲೆ ಹೋಬಳಿ ಮುತ್ಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಅರಿತು  ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಕ್ಷೇತ್ರ ಪ್ರಗತಿಗೆ  ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತರಲು ಪ್ರಯತ್ನಿಸಲಾಗುವುದು. ಪಾರರ್ದಶಕವಾಗಿ ಅಧಿಕಾರಿಗಳು ಕೆಲಸ ಮಾಡಿ ಜನರಿಗೆ ಹತ್ತಿರವಾಗಬೇಕು. ಭ್ರಷ್ಟತೆಯನ್ನು ಸಹಿಸುವುದಿಲ್ಲ. ಜನಪರ ಕಾಳಿಜಿಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತೇನೆ ಎಂದರು. ಕಾಂಗ್ರೆಸ್ ಹಿರಿಯ ಮುಖಂಡ ಮುನಿವೆಂಕಟಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಖಲಂದರ್ ಖಾನ್, ಸಾಧಿಕ್ , ಸರ್ಗೀರ ಅಹಮದ್, ಸೈಯಾದ್ ಪಾಷ, ಆನಂದ್, ಮೂರ್ತಿ ಸೇರಿದಂತೆ ಹಲವು ಮುಖಂಡರು ಅದ್ಧೂರಿಯಾಗಿ ಸನ್ಮಾನಿಸಿ ಶಾಸಕರನ್ನು ಗೌರವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.