ಬೆಂಗಳೂರು ಗ್ರಾಮಾಂತರ

ಎಪಿಎಂಸಿ: 3.5 ಕೋಟಿ ಶುಲ್ಕ ವಸೂಲಿ

Published On :

ಹೊಸಕೋಟೆ: ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಇದುವರೆವಿಗೂ 3.50 ಕೋಟಿ ರೂ.ಗಳ ಮಾರುಕಟ್ಟೆ ಶುಲ್ಕ ವಸೂಲು ಮಾಡಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ ಹೇಳಿದರು. ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರಥಮ ವರ್ಷ ರು. 71 ಲಕ್ಷ ಹಾಗೂ 2012-13ನೇ ಸಾಲಿನಲ್ಲಿ ರು. 2.79 ಕೋಟಿ ಸಂಗ್ರಹಿಸಲಾಗಿದ್ದು, ಜಡಗೇನಹಳ್ಳಿ ಸಮೀಪ  ರು. 1.35 ಕೋಟಿ ವೆಚ್ಚದಲ್ಲಿ 11ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದರು. ಇದೇ ವೇಳೆ, ಸೇವೆಯಿಂದ ನಿವೃತ್ತಿ ಹೊಂದಿದ ಕಾರ್ಯದರ್ಶಿ ಚಿಕ್ಕನರಸಿಂಹರೆಡ್ಡಿ ಅವರನ್ನು ಬೀಳ್ಕೊಡಲಾಯಿತು. ಸಮತಿ ಉಪಾಧ್ಯಕ್ಷ ರಾಮಾಂಜಿನಪ್ಪ, ಸದಸ್ಯರಾದ ಗಣೇಶ್, ಲಕ್ಷ್ಮೀ ನಾರಾಯಣ್, ನಾರಾಯಣಪ್ಪ, ಶ್ರೀರಾಮಪ್ಪ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.