ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಖಂಡನೆ
ಬೆಂಗಳೂರು: ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮಾಡಿದ ಭಾಷಣದಲ್ಲಿ ಹಿಂದಿನ ಸರ್ಕಾರವನ್ನು ಅವಹೇಳನ ಮಾಡಿದ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.
ಸೋಮವಾರ ಮಧ್ಯಾಹ್ನ ನಡೆದ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದ್ದು, ಎಲ್ಲಾ ಶಾಸಕರೂ ಒಕ್ಕೊರಲಿನಿಂದ ರಾಜ್ಯಪಾಲರ ಭಾಷಣದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಭ್ರಷ್ಟಾಚಾರ, ಹಗರಣಗಳು ನಡೆದು ರಾಜ್ಯವು ದೇಶದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದನ್ನು ಖಂಡಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ರಾಜ್ಯಪಾಲರ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಆದರೆ, ಅವರ ಭಾಷಣದಲ್ಲಿ ಹಿಂದಿನ ಸರ್ಕಾರವನ್ನು ಅವಹೇಳನ ಮಾಡಿದ ಬಗ್ಗೆ ಆಕ್ರೋಶವಿದೆ ಎಂದು ಹೇಳಿದರು. ರಾಜ್ಯಪಾಲರ ಭಾಷಣವನ್ನು ಸರ್ಕಾರ ಸಿದ್ಧಪಡಿಸುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಅದನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಭಾಷಣದಲ್ಲಿ ಹಿಂದಿನ ಸರ್ಕಾರವನ್ನು ಅವಹೇಳನ ಮಾಡಿದ್ದನ್ನು ಗಮನಿಸಿದಾಗ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಕಿಡಿ ಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

