ಏತ ನೀರಾವರಿ ಯೋಜನೆಗೆ ಆದ್ಯತೆ
ಆನೇಕಲ್ಲು: ದಕ್ಷಿಣ ಪಿನಾಕಿನಿ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಆನೇಕಲ್ ತಾಲೂಕಿನ ಸರ್ಜಾಪುರ ಹೋಬಳಿಗೆ ನೀರಾವರಿ ಸೌಲಭ್ಯ ಒದಗಿಸಲು ಶ್ರಮಿಸುವುದಾಗಿ ಶಾಸಕ ಬಿ.ಶಿವಣ್ಣ ಭರವಸೆ ನೀಡಿದ್ದಾರೆ. ಅವರು ತಾಲೂಕಿನ ಯಮರೆ ಗ್ರಾಮದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿ ತಾಲೂಕಿನ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಹಲವು ಯೋಜನೆಗಳ ಬಗ್ಗೆ ಪರಿಶೀಲನೆ ನಡೆದಿದೆ. ಕಾವೇರಿ ನೀರು ಸರಬರಾಜಿಗಾಗಿ ಪ್ರಸ್ತಾಪ ಸಲ್ಲಿಸಿದ್ದು ಕಾರ್ಯಗತ ವಾಗುವವರೆವಿಗೂ ಅವಿರತ ಹೋರಾಟ ನಡೆಸುವುದಾಗಿ ತಿಳಿಸಿದರು.ಶಿಂಷಾ ಯೋಜನೆ: ಆನೇಕಲ್ ತಾಲೂಕಿನಲ್ಲಿ ಸೂರ್ಯಚ ನಗರದ 4 ಹಂತಗಳ ಗೃಹ ನಿರ್ಮಾಣ ಯೋಜನೆ ಜಾರಿಯಲ್ಲಿದೆ. ಇದಕ್ಕಾಗಿ ಶಿಂಷಾ ಅಣೆಕಟ್ಟಿನಿಂದ ನೀರು ಸರಬರಾಜು ಯೋಜನೆಗೆ ಹಿಂದಿನ ಸರ್ಕಾರ ಮಂಜೂರಾತಿ ಪಡೆದಿದೆ. ಈ ಬಗ್ಗೆ ಸರ್ಕಾರದ ಉನ್ನತ ಹಂತದಲ್ಲಿ ಕಡತ ಇದ್ದು ಯೋಜನೆ ಅನುಷ್ಠಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.ಸ್ಥಳೀಯರಿಗೆ ಉದ್ಯೋಗ: ತಾಲೂಕಿನಲ್ಲಿ 5 ಕೈಗಾರಿಕಾ ಪ್ರದೇಶಗಳಿದ್ದು ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ತಳೀಯ ಕಾರ್ಖಾನೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ದುಡಿಯುವ ಕೈಗಳಿಗೆ ಉತ್ತಮ ಅವಕಾಶ ನೀಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಬದ್ಧನಾಗಿರುವುದಾಗಿ ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಪ್ರಭಾಕರ ರೆಡ್ಡಿ, ಸಿ. ಆರ್. ಮನೋಹರ್. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಸುಶೀಲಮ್ಮ, ಜಯಶಂಕರ್, ಉಮೇಶ್ ಬಾಬು, ಯಲ್ಲಪ್ಪ, ಸದ್ದಾಂ, ಮಂಜುಳಾ ದೇವರಾಜ್, ವಿನಯ್ ಇದ್ದರು.
ಮದ್ಯಮಾರಾಟ ತಡೆಯಲು ಆಗ್ರಹ
ಮಾಗಡಿ: ಪರಂಗಿಚಿಕ್ಕನಪಾಳ್ಯದಲ್ಲಿ ಕಿರಾಣಿ, ಇತರೆ ಅಂಗಡಿಗಳಲ್ಲಿ ಮದ್ಯಮಾರಾಟ ನಡೆಯುತ್ತಿದ್ದು, ಹಗಲಿನ ವೇಳೆ ಮಹಿಳೆಯರು ಮಕ್ಕಳು ರಸ್ತೆಗಳಲ್ಲಿ ತಿರುಗಾಡುವದಕ್ಕೆ ಆತಂಕ ಎದುರಿಸುತ್ತಿದ್ದಾರೆ. ಮದ್ಯಮಾರಾಟ ಹೆಚ್ಚಿದ್ದು,ನಿರಂತರ ಕುಡಿತದಿಂದಾಗಿ ಎಷ್ಟೋ ಕುಟುಂಬಗಳು ಬೀದಿಪಾಲಾಗುತ್ತಿವೆ. ಒಪ್ಪತ್ತಿನ ಗಂಜಿಗೂ ಗತಿಇಲ್ಲದಂತೆ ಮಹಿಳೆಯರು ಮಕ್ಕಳು ಇಲಾಖೆ ನಿತ್ಯ ಹಿಡಿಶಾಪ ಹಾಕಲಾಗುತ್ತಿದೆ. ಈ ಸಂಬಂಧ ಕೂಡಲೆ ಮದ್ಯಮಾರಾಟ ತಡೆಯುವಂತೆ ಸಂಬಂಧಪಟ್ಟ ಇಲಾಖೆಗೆ ದೂರು ನೀಡಲು ಗ್ರಾಮಸ್ಥರು ಹಾಗೂ ಸ್ತ್ರೀಶಕ್ತಿ ಸಂಘಟನೆಗಳು ಒಕ್ಕೊರಲಿನ ತೀರ್ಮಾನ ಕೈಗೊಂಡಿದೆ. ಈ ಸಂಬಂಧ ಅಬಕಾರಿ ಇಲಾಖೆಗೆ ಲಿಖಿತ ದೂರು ನೀಡಿರುವುದಾಗಿ ನೇತೇನಹಳ್ಳಿ ಗ್ರಾ.ಪಂ. ಅಧ್ಯಕ್ಷ ದಶರಥ, ಯಾಲಕ್ಕಯ್ಯ ಇತರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

