ಬೆಂಗಳೂರು ಗ್ರಾಮಾಂತರ

ದಲಿತರಿಗೆ ಬಹಿಷ್ಕಾರ: ಖಂಡನೆ

Published On :

ನೆಲಮಂಗಲ: ಕನಕಪುರ ತಾಲೂಕು ಹುಯ್ಕೆಂಬಳ್ಳಿ ಹೋಬಳಿ ಏಳಗಳ್ಳಿ ಗ್ರಾಮದಲ್ಲಿ ಮುದ್ದಮ್ಮದೇವಿ ಜಾತ್ರಾ  ಮಹೋತ್ಸವದಲ್ಲಿ ಕೊಂಡಕ್ಕೆ ದಲಿತನೊಬ್ಬ ಸೌದೆ ತಳ್ಳಿದನೆಂಬ ವಿಚಾರಕ್ಕೆ ಆತನ ಮೇಲೆ ಹಲ್ಲೆ ನಡೆಸಿ ದಲಿತರಿಗೆ ಬಹಿಷ್ಕಾರ ಹಾಕಿರುವುದನ್ನು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪಿ.ನಾರಾಯಣಸ್ವಾಮಿ ಖಂಡಿಸಿದ್ದಾರೆ.  ಈ ಘಟನೆಗೆ ಕಾರಣಕರ್ತರಾದ ಮಧು, ಬಸವರಾಜು, ಶಿವರಾಜು, ಮರಿಗೌಡ ಎಂಬುವರನ್ನು ಕೂಡಲೇ ಕಾನೂನಿನ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಿ ಕೂಡಲೇ ಅವರನ್ನು  ಕಾನೂನಿನ ಅಡಿಯಲ್ಲಿ ಬಂಧಿಸಿ ಹಾಗೂ ಕನಕಪುರ ತಾಲೂಕು ದಂಡಾಧಿಕಾರಿ ಮತ್ತು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳನ್ನು ಸರ್ಕಾರದ ಸೇವೆಯಿಂದ ವಜಾಗೊಳಿಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಿಡವಂದ ರಾಜು ಒತ್ತಾಯಿಸಿದ್ದಾರೆ.  
ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ
ಕೋಲಾರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕ್ಯಾನ್ಸರರ್ನಿರ್ಮೂಲನಾ ಯೋಜನೆಯಡಿ ಜೂ.11ರಂದು ಉಚಿತ ಕ್ಯಾನ್ಸರ್ ತಪಾಸಣಾ ಆರೋಗ್ಯ ಶಿಬಿರವನ್ನು ಬಂಗಾರಪೇಟೆ ತಾಲೂಕಿನ ಬೇತಮಂಗಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಪಡೆದುಕೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
'ಪರಿಸರ ಉಳಿಸಿ'
ಕೋಲಾರ: ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಟಮಕ ಸಮೀಪದ ಅಂತರಗಂಗೆ ಬಡಾವಣೆಯಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ಕೆ ಪ್ರಾಧಿಕಾರದ ಆಯುಕ್ತರಾದ ಕೆ.ಎಸ್. ನಾಗರಾಜಗೌಡ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.