ಬೆಂಗಳೂರು ಗ್ರಾಮಾಂತರ

ಕಾರು ಉರುಳಿ ವ್ಯಕ್ತಿ ಸಾವು

Published On :

ರಾಮನಗರ: ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟು 4 ಮಂದಿ ಗಾಯಗೊಂಡಿರುವ ಘಟನೆ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಭವಿಸಿದೆ. ಬೆಂಗಳೂರಿನ ಮತ್ತೀಕೆರೆ ವಾಸಿ ಲೋಕೇಶ್ ಮೃತ ದುರ್ದೈವಿ. ಮಾಗಡಿಯ ದಂಡೇನಹಳ್ಳಿಯ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 48ರ ಬಗಿನಗೆರೆಯ ಆದಿ ಚುಂಚನಗಿರಿ ಶಾಲೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿ ಹೊಡೆಯಿತು. ಪರಿಣಾಮ ಲೋಕೇಶ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರೆ 4 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಮೃತರ ಪತ್ನಿ ನಿರ್ಮಲ ಕುದೂರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.