ಮಹದೇವಪುರ: ಎಳನೀರು ವ್ಯಾಪಾರಿ ಕೊಚ್ಚಿ ಕೊಲೆ
ಬೆಂಗಳೂರು: ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಎಳನೀರು ವ್ಯಾಪಾರಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಉದಯನಗರ ನಿವಾಸಿ ಮುನಿಸ್ವಾಮಿ(63) ಹತ್ಯೆಯಾದವರು. ಎ. ನಾರಾಯಣಪುರ ರೇಲ್ವೆ ಹಳಿ ಸಮೀಪ ಅವರ ಮೃತದೇಹ ಪತ್ತೆಯಾಗಿದೆ.
ಎಳನೀರು ವ್ಯಾಪಾರ ಮುಗಿಸಿಕೊಂಡು ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ರೇಲ್ವೆ ಹಳಿ ಸಮೀಪದಲ್ಲಿ ಬಿದ್ದಿದ್ದ ಮೃತದೇಹ ಗಮನಿಸಿದ ಸಾರ್ವಜನಿಕರು ಅಪಘಾತ ಸಂಭವಿಸಿರಬಹುದು ಎಂದು ಭಾವಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸಿ ಪರಿಶೀಲಿಸಿದಾಗ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.
ಮೃತ ಮುನಿಸ್ವಾಮಪ್ಪ ಅವರ ಜೇಬಿನಲ್ಲಿದ್ದ ಪರ್ಸ್ ಹಾಗೂ ಮೊಬೈಲ್‌ನಿಂದ ಅವರ ಕುಟುಂಬ ಸದಸ್ಯರನ್ನು ಪತ್ತೆ ಮಾಡಿ ಮಾಹಿಡಿ ನೀಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಸಿಕ್ಕಿದ ಮುನಿಸ್ವಾಮಿ ಅವರ ವಾಹನವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಅವರ ಬಳಿ ಇದ್ದ ಹಣ ಕಳವಾಗಿಲ್ಲ. ಹಾಗಾಗಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೂಲತಃ ವರ್ತೂರಿನವರಾದ ಮುನಿಸ್ವಾಮಿ ಅವರಿಗೆ ಇಬ್ಬರು ಪತ್ನಿಯರಿದ್ದಾರೆ. ಆತ ಈ ಹಿಂದೆ ತರಕಾರಿ ವ್ಯಾಪಾರ ನಡೆಸುತ್ತಿದ್ದರು. ಕೆಲ ವರ್ಷಗಳಿಂದ ಉದಯನಗರದಲ್ಲಿ ವಾಸಿಸುತ್ತಿದ್ದು, ಮಾರತ್‌ಹಳ್ಳಿಯಲ್ಲಿ ಪೆಟ್ಟಿ ಅಂಗಡಿ ಇಟ್ಟು ಜತೆಯಲ್ಲಿ ಎಳನೀರು ವ್ಯಾಪಾರ ನಡೆಸುತ್ತಿದ್ದರು ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

