ಬೆಂಗಳೂರು ಗ್ರಾಮಾಂತರ

ಮುತ್ತತ್ತಿಯಲ್ಲಿ ನಗರದ ಯುವಕ ನೀರುಪಾಲು

Published On :

ಹಲಗೂರು: ಪ್ರವಾಸಿ ಕ್ಷೇತ್ರ ಮುತ್ತತ್ತಿ ಕಾವೇರಿ ನದಿಗೆ ಕಾಲುಜಾರಿ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು ನಿವಾಸಿ ಚನ್ನೇಗೌಡ (25) ಮೃತಪಟ್ಟವರು. ಮೂಲತಃ ರಾಮನಗರ ತಾಲೂಕು ಹೊಂಬೇಗೌಡನದೊಡ್ಡಿ ಗ್ರಾಮದ ವಾಸಿ ಚನ್ನ ಹನುಮಯ್ಯ ಅವರ ಮಗ ಸಿ. ಚನ್ನೇಗೌಡ ಬೆಂಗಳೂರಿನ ಗಾಂಧಿನಗರದಲ್ಲಿರುವ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಭಾನುವಾರ ರಜಾ ದಿನ ಸ್ನೇಹಿತ ಚೇತನ್ ಅವರ ಹುಟ್ಟು ಹಬ್ಬ ಆಚರಿಸುವ ಸಲುವಾಗಿ ಎರಡು ಮೋಟಾರ್ ಬೈಕ್‌ನಲ್ಲಿ ಚಂದ್ರಶೇಖರ, ಚೇತನ, ಉದಯ, ಚನ್ನೇಗೌಡ ಮುತ್ತತ್ತಿಗೆ ಬಂದು ದೇವರ ದರ್ಶನ ಪಡೆದು ಊಟ ಮುಗಿದ ನಂತರ ಕೈತೊಳೆಯಲು ಕಾವೇರಿ ನದಿಯ ದಡಕ್ಕೆ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಚನ್ನೇಗೌಡ ಮೃತಪಟ್ಟಿದ್ದಾರೆ.  ಡಾ. ಶ್ವೇತ ಶವ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.  ಎ ಎಸ್ ಐ ಶಂಕರಯ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.