ಬೆಂಗಳೂರು ಗ್ರಾಮಾಂತರ

ಶಾಲೆಗೆ ರು. 3.50 ಲಕ್ಷ ವೆಚ್ಚದ ಕಾಂಪೌಂಡ್ ಕಾಮಗಾರಿ

Published On :

ದೇವನಹಳ್ಳಿ : ತಾಲೂಕು ದೊಡ್ಡಸಣ್ಣೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ತಾಲೂಕು ಭಾರತ ಸೇವಾದಳದವರು ದತ್ತು ಪಡೆದಿದ್ದು ಶಾಲೆಗೆ ಅಗತ್ಯವಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಈ ಶಾಲೆಯಲ್ಲಿ 3.50 ಲಕ್ಷ ರು. ವೆಚ್ಚದ ಕಾಂಪೌಂಡ್ ಕಾಮಗಾರಿ ನಡೆಯುತ್ತಿದ್ದು ಭಾರತ ಸೇವಾದಳ ಅಧ್ಯಕ್ಷ ಎಸ್.ಲಕ್ಷ್ಮೀನಾರಾಯಣ್ ಅವರು ಸೋಮವಾರ ಪರಿಶೀಲನೆ ನಡೆಸಿದರು.
ಈ ಶಾಲೆಯನ್ನು ಕಳೆದ ಎರಡು ವರ್ಷಗಳ ಹಿಂದೆ ದತ್ತು ಪಡೆದಿದ್ದು ಶಾಲೆಗೆ ಅಗತ್ಯವಾದ ಡೆಸ್ಕ್ ಮತ್ತು  ಬೆಂಚ್ಗಳನ್ನು ದಾನಿಗಳಿಂದ ಕೊಡಿಸಲಾಗಿದ್ದಲ್ಲದೆ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಗಿದೆ. ಈಗ ಪಂಚಾಯಿತಿ ಮತ್ತು ಸರ್ವ ಶಿಕ್ಷಣ ಅಭಿಯಾನ ಯೋಜನೆಯಲ್ಲಿ ಕಾಂಪೌಂಡ್ ಕಾಮಗಾರಿಯನ್ನು ಆರಂಭಿಸಿದ್ದು ಒಂದು ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಎಸ್.ಲಕ್ಷ್ಮೀನಾರಾಯಣ್ ತಿಳಿಸಿದರು. ಈ ಸಂದರ್ಭದಲ್ಲಿ ಭಾರತ ಸೇವಾದಳ ಸಂಚಾಲಕರಾದ ಬಿ.ಪುಟ್ಟಸ್ವಾಮಿ, ಬೈಚಾಪುರ ವೆಂಕಟರಾಜು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.