18ಕ್ಕೆ ಹಿತರಕ್ಷಣಾ ಸಮಿತಿ ಸಭೆ
ರಾಮನಗರ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯು ಜೂ.18ರ ಬೆಳಗ್ಗೆ 12ಕ್ಕೆ ಮಾಗಡಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಗೆ ತಾಲೂಕಿನ ಪರಿಶಿಷ್ಟ ಜಾತಿ, ಪಂಗಡಗಳ ಮುಖಂಡರು, ಸಂಘ ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
17ರಂದು ಪ್ರಗತಿ ಪರಿಶೀಲನಾ ಸಭೆ
ರಾಮನಗರ: ಜಿಲ್ಲೆಯ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಜೂ.17ರ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಲಿದೆ. ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಗೆ ಸಂಬಂಧಿಸಿದ ವರದಿಯನ್ನು ಜೂ.12ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಹಾಗೂ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಚರ್ಚಿಸಲು ಯಾವುದೇ ಪ್ರತಿನಿಧಿಗಳನ್ನು ನಿಯೋಜಿಸದೇ ಅಧಿಕಾರಿಗಳೇ ಖುದ್ದಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದ್ದಾರೆ.
ನಾಳೆ ಜಿಪಂ ಸಾಮಾನ್ಯ ಸಭೆ
ರಾಮನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ಮುದ್ದುರಾಜ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ಜೂ.13ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಸಿಇಒ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ರಾಮನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಜಿಲ್ಲಾ ಸರ್ಕಾರೇತರ ಸಂಸ್ಥೆಗಳ ಒಕ್ಕೂಟದಿಂದ ಜೂ.12ರ ಬೆಳಗ್ಗೆ 9ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಹಾಗೂ ವಿಚಾರ ಸಂಕಿರಣ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಉದ್ಘಾಟಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ್ ಅವರು ಅಧ್ಯಕ್ಷತೆ ವಹಿಸುವರು. ಜಿ.ಪಂ. ಸಿಇಒ ಡಾ.ಎಂ.ವಿ.ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸುವರು. ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಮನಾ, ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ಶಾಂತಪ್ಪ ಮತ್ತಿತರರು ಭಾಗವಹಿಸುವರು. ಬಾಲ ಕಾರ್ಮಿಕ (ನಿಷೇಧ ನಿಯಂತ್ರಣ) ಕಾಯ್ದೆ 1986 ಕುರಿತು ಜಿಲ್ಲಾ ಕಾರ್ಮಿಕಾಧಿಕಾರಿ ಎಂ.ನಾಗರಾಜು ಹಾಗೂ ತಂಬಾಕು ನಿಷೇಧ ಕಾಯ್ದೆ ಕುರಿತು ವಕೀಲ ಚಾನ್ ಪಾಷ ಉಪನ್ಯಾಸ ನೀಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

