ಬೆಂಗಳೂರು ಗ್ರಾಮಾಂತರ

ಮ್ಯಾನೇಜ್‌ಮೆಂಟ್‌ತರಬೇತಿ

Published On :

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಸಂಸ್ಥೆಯು 'ಕರ್ನಾಟಕ ಇನ್‌ಸ್ಟಿಟ್ಟೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್‌' ತರಬೇತಿಯನ್ನು ಜುಲೈ 15ರಿಂದ ನೀಡಲಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ ಸಂಸ್ಥೆಗಳಲ್ಲಿ, ಸಹಕಾರ ಇಲಾಖೆಯಲ್ಲಿ ಹಾಗೂ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಖಾಸಗಿ ಹಾಗೂ ಪರಿಶಿಷ್ಟ ಜಾತಿ/ ಪಂಗಡದ ವರ್ಗದವರಿಗೂ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕನಿಷ್ಠ ವಿದ್ಯಾರ್ಹತೆ ಜೊತೆಗೆ ಕನಿಷ್ಠ 1 ವರ್ಷಗಳ ಕಾಲಾವಧಿಯ ಸೇವೆ ಸಲ್ಲಿಸುತ್ತಿರುವವರಾಗಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 3ರೊಳಗಾಗಿ ಪ್ರಾಂಶುಪಾಲರಿಗೆ ತಲುಪುವಂತೆ ಕಳುಹಿಸಬೇಕು. ಅರ್ಜಿ ದೊರೆಯುವ ಸ್ಥಳದ ವಿಳಾಸ: ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್, ನಂ-164, ಒಂದನೇ ಮುಖ್ಯರಸ್ತೆ, ಚಾಮರಾಜಪೇಟೆ. ದೂ: 8904011235.
ಬಾಕಿ ಪಾವತಿಸದ ಮಳಿಗೆಗಳಿಗೆ ಬೀಗ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಎಚ್.ಎಸ್.ಆರ್ ವಾಣಿಜ್ಯ ಸಮುಚ್ಚಯದಲ್ಲಿ ಹಂಚಿಕೆ ಪಡೆದು ಬಾಡಿಗೆ ಹಣ ಪಾವತಿಸದ 7 ಮಳಿಗೆಗಳಿಗೆ ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಬೀಗಮುದ್ರೆ ಹಾಕಿದರು. ಪ್ರಾಧಿಕಾರಕ್ಕೆ ಬಾಡಿಗೆ ಪಾವತಿಸದೆ ಬಾಕಿ ಉಳಿಸಿಕೊಂಡ ಹಂಚಿಕೆದಾರರಿಗೆ ನೋಟಿಸ್ ನೀಡಿದರೂ ಸೂಕ್ತವಾಗಿ ಸ್ಪಂದಿಸದ ಕಾರಣ ಅಂತಿಮ ನೋಟಿಸ್ ನೀಡಿ ಮಳಿಗೆಗಳಿಗೆ ಬೀಗಮುದ್ರೆ ಹಾಕಲಾಯಿತು. ಈ ಮಳಿಗೆಗಳ ಹಂಚಿಕೆದಾರರು ಪ್ರಾಧಿಕಾರಕ್ಕೆ ಸುಮಾರು ರು. 48 ಲಕ್ಷ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಪ್ರಾಧಿಕಾರದ ಎಸ್ಟೇಟ್ ಅಧಿಕಾರಿ ಸಿ.ಪಿ. ಶೈಲಜಾ, ಉಪ ಕಾರ್ಯದರ್ಶಿ ಪಿ.ಎನ್. ಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪ್ರಾಧಿಕಾರದ ಪೂರ್ವ ವಿಭಾಗದ ಕಂದಾಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಾಧಿಕಾರದ ಪೊಲೀಸ್ ಸಿಬ್ಬಂದಿ, ಸ್ಥಳೀಯ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಗೆ ನೆರವು ನೀಡಿದರು.
ಪಿಎಚ್‌ಡಿ ಪದವಿ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಎಲ್. ಕಿರಣ್ ಕುಮಾರ್ ಮಂಡಿಸಿದ ಪ್ರಬಂಧಕ್ಕೆ ಪಿಎಚ್‌ಡಿ ನೀಡಿದೆ. ಅವರು 'ಪ್ರೊಫೈಲ್ ಆಫ್ ಪೋಸ್ಟ್ ಗ್ರಾಜ್ಯುವೇಟ್ ಸ್ಟೂಡೆಂಟ್ಸ್ ಆಫ್ ಬೆಂಗಳೂರು ಯೂನಿವರ್ಸಿಟಿ- ಅನಲಿಟಿಕಲ್ ಸ್ಟಡಿ' ಎಂಬ ವಿಚಾರದಲ್ಲಿ ಪ್ರಬಂಧ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.