ಬೆಂಗಳೂರು ಗ್ರಾಮಾಂತರ

ಹೊಟ್ಟೆ ನೋವು: ಮಹಿಳೆ ಆತ್ಮಹತ್ಯೆ

Published On :

ರಾಮನಗರ: ಮಹಿಳೆಯೊಬ್ಬರು ಹೊಟ್ಟೆ ನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕೋಟಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.  ನಾಗರಾಜು ಅವರ ಪತ್ನಿ ವನಗಂಗ ಅವರೇ ಮೃತರು. ಇವರಿಗೆ ಪದೇ ಪದೇ ಹೊಟ್ಟೆ ನೋವು ಬರುತ್ತಿದ್ದು, ಚಿಕಿತ್ಸೆ ಕೊಡಿಸಿದ್ದರೂ ವಾಸಿಯಾಗಿರಲಿಲ್ಲ. ಜೂ.4ರಂದು ಹೊಟ್ಟೆ ನೋವು ಬಂದಾಗ ತಾಳಲಾರದೇ ಕ್ರಿಮಿನಾಶಕ ಸೇವಿಸಿದ್ದರು. ಇವರನ್ನು ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಲಕಿ ಕರದೊಯ್ದ ದುಷ್ಕರ್ಮಿ
ರಾಮನಗರ: ಶಾಲೆಗೆ ತೆರಳಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿರುವ ಘಟನೆ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ದೊಡ್ಡಾಲಳ್ಳಿ ವಾಸಿ ವೆಂಕಟೇಶ್ (ಹೆಸರು ಬದಲಾಯಿಸಿದೆ) ಅವರ ಪುತ್ರಿ ಶಾಲೆಗೆ ತೆರಳಿದ್ದ ವೇಳೆ ಅದೇ ಗ್ರಾಮದ ಮುತ್ತ ಎಂಬಾತ ಪುಸಲಾಯಿಸಿ ಕರೆದೊಯ್ದಿದ್ದಾನೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಪರಿಚಿತ ಶವ ಪತ್ತೆ
ಆನೇಕಲ್: ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಶವವೊಂದು ಆನೇಕಲ್ ಠಾಣಾ ವ್ಯಾಪ್ತಿಯ ಬಗ್ಗನದೊಡ್ಡಿಯಲ್ಲಿ ಪತ್ತೆಯಾಗಿದ್ದು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ಪಿಎಸ್ಸೈ ಬೈಂದೂರು ತಿಳಿಸಿದ್ದಾರೆ. ಗುರುವಾರ ಸಂಜೆ ಬಂದ ದೂರವಾಣಿ ಕರೆಯ ಮೇರೆಗೆ ತೆರಳಿದಾಗಿ ಪುರುಷನೊಬ್ಬನನ್ನು ಕೊಂದು ನಂತರ ಗುರುತು ಸಿಗದಂತೆ ಬೆಂಕಿ ಹಚ್ಚಿ ಸುಡಲಾಗಿದೆ. ಸ್ಥಳದಲ್ಲಿ ಕೆಲವು ಸುಳಿವು ದೊರೆತಿದ್ದು ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದನ್ನು ತಿಳಿಯಲಾಗುವುದು ಎಂದಿದ್ದಾರೆ.
ಇಂದು ಗ್ರಾಮ ಸಂದರ್ಶನ
ಮಾಗಡಿ: ತಾಲೂಕಿನ ಕಲ್ಯಾ ಮತ್ತು ಕಾಳಾರಿ ಕಾವಲ್ ಗ್ರಾಮ ಪಂಚಾಯ್ತಿ ವತಿಯಿಂದ ಜೂ.14 ರಂದು  ಶುಕ್ರವಾರ ಬೆಳಿಗ್ಗೆ  8.30 ರಿಂದ ಸಂಜೆ 6.30 ರವರೆಗೆ ಆಯಾ ಪಂಚಾಯ್ತಿಯ ಗ್ರಾಮಗಳಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಸಂದರ್ಶನ ಏರ್ಪಡಿಸಲಾಗಿದೆ. ಆಯಾ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು ಹಾಗು ಪಿಡಿಓ ಹಾಗು ಇತರೆ ಅಧಿಕಾರಿಗಳು ಭಾಗವಹಿಸಿ ಗ್ರಾಮ ಸಮಸ್ಯೆಗಳು ಹಾಗೂ ಜನತೆಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಬಹುದು ಎಂದು ಪಿಡಿಓ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.