ಇಂದು ಸಿಐಟಿಯು ಪ್ರತಿಭಟನೆ
ಆನೇಕಲ್ಲು: ದೇಶಾದ್ಯಂತ ದಿನ ನಿತ್ಯಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು ಜೀವನ ನಡೆಸುವುದು ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆನೇಕಲ್ ತಾಲೂಕು ಸಿಐಟಿಯು ಘಟಕ ವತಿಯಿಂದ ಜೂ.14 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ತಾಲೂಕು ಕಚೇರಿ ಮುಂದೆ ಮುಷ್ಕರ ನಡೆಸಲಾಗುವುದು ಎಂದು ಅಧ್ಯಕ್ಷ ಡಿ. ಮಹದೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಎನ್. ಮಂಜುನಾಥ್ ಜಂಟಿ ಹೇಳಿಕೆ ನೀಡಿದ್ದಾರೆ.
ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ
ದೊಡ್ಡಬಳ್ಳಾಪುರ: ಇಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ ಸಂಘಧ ಅಧ್ಯಕ್ಷ ಸಿ.ಚಿಕ್ಕಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಿತು. ಅದೇ ರೀತಿ 80 ವರ್ಷ ಮೀರಿದ ನಿವೃತ್ತ ಸರ್ಕಾರಿ ನೌಕರರಿಗೆ ಜುಲೈ ತಿಂಗಳಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು. ಸಭೆಗೆ ಸಂಘದ ರಾಜ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಸ್ವಾಮೀಜಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಸನ್ಮಾನ: ಇದೇ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾಜ್ ಮತ್ತು ಕಾರ್ಯದರ್ಶಿ ವಿಷ್ಣುಮೂರ್ತಿ, ಜಿಲ್ಲಾ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಹನುಮಂತರಾಯಪ್ಪ ಏಕಪಾತ್ರಾಭಿನಯ ನಡೆಸಿಕೊಟ್ಟರು. ಸಂಘದ ಪ್ರಧಾನ ಕಾರ್ಯದರ್ಶಿ ವಿ.ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.ಖಜಾಂಚಿ ಎಂ.ಎ.ಹನುಮಂತರಾಜು, ಕೆ.ಶ್ರೀನಿವಾಸಮೂರ್ತಿ, ಹನುಮಂತರಾಯಪ್ಪ ಮತ್ತಿತರರು ಭಾಗವಹಿಸಿದ್ದರು.
'ವೈಜ್ಞಾನಿಕ ರೀತಿಯಲ್ಲಿ ಹಸು ಪೋಷಣೆ'
ಆನೇಕಲ್: ಹಾಲಿನ ಗುಣಮಟ್ಟ ಹೆಚ್ಚಿಸಲು ಹಾಗೂ ಶುದ್ಧ ಹಾಲು ಉತ್ಪಾದನೆಗಾಗಿ ವೈಜ್ಞಾನಿಕ ರೀತಿಯಲ್ಲಿ ಹಸುಗಳನ್ನು ಸಾಕಾಣೆ ಮಾಡಬೇಕೆಂದು ಬಮೂಲ್ ನಿರ್ದೇಶಕ ಆರ್.ಕೆ. ರಮೇಶ್ ಕರೆ ನೀಡಿದ್ದಾರೆ. ಅವರು ಆನೇಕಲ್ಲಿನ ಶೀಥಲ ಕೇಂದ್ರದಲ್ಲಿ ರಾಸುಗಳ ಕ್ಲೇಮು ವಿತರಣೆ ನಂತರ ಮಾತನಾಡಿ ಹಸುಗಳ ಪಾಲನೆಯಲ್ಲಿ ವಿವಿಧ ಹಂತಗಳಿದ್ದು ಕ್ರಮ ಬದ್ಧ ಆಹಾರ ನೀಡುವಿಕೆಯಿಂದ ಹಾಲು ಉತ್ಪಾದನೆ ಹೆಚ್ಚುತ್ತದೆ. ಹಾಲಿನಲ್ಲಿ ಜಿಡ್ಡಿನಾಂಶ ಹೆಚ್ಚಾದಲ್ಲಿ ಹಾಲಿಗೆ ಉತ್ತಮ ಬೆಲೆ ದೊರೆಯುತ್ತದೆ. ಹಾಲು ಒಕ್ಕೂಡ ಲೀಟರ್ ಹಾಲಿಗೆ ರು. 4 ಪ್ರೋತ್ಸಾಹ ಧನ ನೀಡುವ ಮೂಲಕ ರೈತರ ಆಭ್ಯುದಯಕ್ಕೆ ಕಾರಣವಾಗಿದೆ. ರೈತರೂ ಹಸಿರು ಮೇವು ಹಾಗೂ ಪಶು ಆಹಾರ ನೀಡುವ ಮೂಲಕ ಒಳ್ಳೆಯ ಹಾಲು ಪಡೆದು ಒಕ್ಕೂಟದ ಲಾಭಕ್ಕೆ ಕೈ ಜೋಡಿಸಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

