ಪೋಷಕರು ಕೇವಲ ಶಿಕ್ಷಣ ಶುಲ್ಕ ಪಾವತಿಗೇ ಸೀಮಿತವಾಗಬಾರದು
ಚಿಕ್ಕಬಳ್ಳಾಪುರ: ತಂದೆ- ತಾಯಿಗಳಿಂದಲೇ ಮಕ್ಕಳಿಗೆ ಮೊದಲು ನಿಜವಾದ ಶಿಕ್ಷಣ ದೊರೆಯುವುದು. ಈ ಹಿನ್ನೆಲೆಯಲ್ಲಿ ಶಾಲೆಗೆ ಬಂದು ಕೇವಲ ಶುಲ್ಕ ಕಟ್ಟುವುದಕ್ಕೆ ಮಾತ್ರ ಪೋಷಕರು ಸೀಮಿತವಾಗಬಾರದು. ಗುಣಮಟ್ಟದ ಶಿಕ್ಷಣವನ್ನು ಕೊಡಿಸುವಲ್ಲಿ ಆದರ್ಶ ಮೆರೆಯಬೇಕು ಎಂದು ಆದಿಚುಂಚನಗಿರಿಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ವರ್ಲ್ಡ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಪೋಷಕರ ಜವಾಬ್ದಾರಿ ಒತ್ತಿ ಹೇಳಿದರು. ಸ್ವಯಂ ಮೊದಲು ಅಕ್ಕಿಯಲ್ಲಿ ಓಂ ಬರೆಸಿ ಮಕ್ಕಳ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು.
ಆಧುನಿಕ ಭರಾಟೆಯಲ್ಲಿ ಸಂಸ್ಕೃತಿ ಮರೆಯುವುದು ಸಲ್ಲದು. ಈ ನಿಟ್ಟಿನಲ್ಲಿ ಸಂಸ್ಕೃತಿ ಉಳಿಸಿ ಬೆಳೆಸಲು ಅರಿವು ಮೂಡಿಸಬೇಕು. ಈಗ ಪೋಷಕರು ಶಾಲೆಗೆ ಬಂದು ಶುಲ್ಕ ಕಟ್ಟುವುದಕ್ಕೆ ಮಾತ್ರ ಸೀಮಿತವಾಗುತ್ತಿದ್ದಾರೆ. ತದ ನಂತರ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡುವಲ್ಲಿ ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯವನ್ನು ವಹಿಸುತ್ತಿದ್ದಾರೆ. ಇಂತಹ ಭಾವನೆ ದೂರವಾಗಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಅದಿಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ವಿಶಾಲ್, ಪ್ರೊ. ಶಿವರಾಮರೆಡ್ಡಿ, ಮುಖಂಡರಾದ ಕೆ.ಪಿ.ಶ್ರೀನಿವಾಸ ಮೂರ್ತಿ, ಜಿ.ಆರ್. ನಾರಾಯಣಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

