ವಿವಾಹಿತೆ ಸಾವು: ಇಬ್ಬರ ಬಂಧನ
ದೊಡ್ಡಬಳ್ಳಾಪುರ: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಶಾಂತಿನಗರದ 7ನೇ ಕ್ರಾಸ್‌ನಲ್ಲಿ ನಡೆದಿದೆ. ಮಂಜುಳಾ(28) ಮೃತ ದುರ್ದೈವಿ. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಮನೆಯಲ್ಲೇ ಆಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಯುವತಿ ಪೋಷಕರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ವರದಕ್ಷಿಣೆ ಆರೋಪ: ಘಟನೆ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿರುವ ಯುವತಿ ಪೋಷಕರು ಆಕೆಯ ಗಂಡ ಸದಾಶಿವ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂದು ಆರೋಪಿಸಿದ್ದಾರೆ. ಮೃತಳ ಪತಿ ಸದಾಶಿವ ಆಕೆ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಬದುಕಿರಬಹುದೆಂದು ಆಸ್ಪತ್ರೆಗೆ ಸಾಗಿಸಲಾಯ್ತು. ಆದರೆ ಆಕೆ ಸಾವನ್ನಪ್ಪಿದ್ದಾಳೆ ಎಂಬ ಹೇಳಿಕೆ ನೀಡಿದ್ದಾನೆ. ಆದರೆ, ಮೃತಳ ಮೈಮೇಲೆ ಮೂಡಿರುವ ಗಾಯದ ಗುರುತುಗಳ ಅನೇಕ ಅನುಮಾನಗಳಿಗೆ ಕಾರವಾಗಿವೆ.
ಇಬ್ಬರ ಬಂಧನ: ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಪೊಲೀಸರು ಮೃತಳ ಗಂಡ ಸದಾಶಿವ ಮತ್ತು ಆತನ ಗೆಳೆಯರಿಬ್ಬರನ್ನು ಬಂಧಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

