ಬೆಂಗಳೂರು ಗ್ರಾಮಾಂತರ

ಸೂಲಿಬೆಲೆಯಲ್ಲಿ ಶಿಕ್ಷಣ ತೇರು ಶಾಲೆಯೆಡೆಗೆ...

Published On :

ಸೂಲಿಬೆಲೆ: ಹೊಸಕೋಟೆ ತಾಲೂಕಿನ ಶಿಕ್ಷಣ ಪೌಂಡೇಷನ್‌ವತಿಯಿಂದ ಗುರುವಾರ ಪಟ್ಟಣದ ಟೌನ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಿಕ್ಷಣ ತೇರು ಶಾಲೆಯಡಿಗೆ ಎಂಬ ವಿಶಿಷ್ಟ ಕಾರ್ಯಕ್ರಮಕ್ಕೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ವೈ ನಾಗರಾಜ್ ಚಾಲನೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ. ಶ್ರೀನಿವಾಸ್, ಶಿಕ್ಷಣ ಪೌಂಡೇಷನ್ ಸಂಸ್ಥೆ ಸರ್ಕಾರಿ ಶಾಲೆಗಳ ಪ್ರಗತಿಗೆ ಕಳೆದ 5 ವರ್ಷಗಳಿಂದ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಖಾಸಗಿ ಶಾಲೆಗಿಂತ ಉತ್ತಮ ಮಟ್ಟದಲ್ಲಿ ಶೈಕ್ಷಣಿಕವಾಗಿ ಸರ್ಕಾರಿ ಶಾಲೆಯ ಮಕ್ಕಳು ಪ್ರಗತಿಹೊಂದಲು ಈ ಮೂಲಕ ಕಾರಣವಾಗುತ್ತಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು. ಹಿರಿಯ ಶಿಕ್ಷಕ ಶರಣಪ್ಪ ಕಂಬಳಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರ ಸಿಗಬೇಕು ಎಂದು ಹೇಳಿದರು.
ಜಿಲ್ಲಾ ಸಂಯೋಜಕ ವಿಶ್ವನಾಥ್, ಕ್ಲಸ್ಟರ್ ಮಾರ್ಗದರ್ಶಿ ಸುನಿಲ್ ಮಾತನಾಡಿ, ಶಿಕ್ಷಣಕ್ಕಾಗಿ ಸಂಸ್ಥೆ ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಸಂಸ್ಥೆ ದತ್ತು ಪಡೆದ ತಾಲೂಕಿನ 104 ಸರ್ಕಾರಿ ಶಾಲೆಗಳಿಗೆ ಶಿಕ್ಷಣ ತೇರು ಪ್ರಯಾಣಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು. ಗಂಗವಾರ ಸನ್‌ರೈಸ್ ಇಂಟರ್ ನ್ಯಾಷನಲ್ ಶಾಲೆ ಕಾರ್ಯದರ್ಶಿ ಮುನಿಆಂಜಿನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಮಾತನಾಡಿದರು.
ಇದೇ ವೇಳೆ ಪರಿಸರ ದಿನಾಚರಣಿ ಅಂಗವಾಗಿ ಶಾಲೆ ಆವರಣದಲ್ಲಿ ಗಿಡ ನೆಡಲಾಯಿತು. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲು ಕಲಿಕಾ ಮಿತ್ರ ಎಂಬ ವಿನೂತನ ಸೇವೆಯನ್ನು ಜಾರಿಗೆ ತರಲಾಯಿತು. ತಾಲೂಕು ಸಂಯೋಜಕ ಚೇತನ್, ಮುಖ್ಯ ಶಿಕ್ಷಕಿ ಓಂಕಾರಮ್ಮ, ಆಶ್ವತ್ಥ್, ಹಿರಿಯ ಗ್ರಾಪಂ ಸದಸ್ಯ ಶಿವಣ್ಣ,ಎಸ್.ಕೆ ರಾಘವೇಂದ್ರ, ಗಂಗವಾರ ರಾಜಣ್ಣ, ಮುನಿರಾಜ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಚಲಪತಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.