ಸಂಸ್ಕೃತಿ ಟ್ರಸ್ಟ್ ರಕ್ತದಾನ ಶಿಬಿರ; 60 ಬಾಟಲಿ ರಕ್ತ ಸಂಗ್ರಹ
ದೊಡ್ಡಬಳ್ಳಾಪುರ: ಪಟ್ಟಣದ ಸಂಸ್ಕೃತಿ ಟ್ರಸ್ಟ್ ನೇತೃತ್ವದಲ್ಲಿ 'ವಿಶ್ವ ರಕ್ತದಾನಿಗಳ ದಿನಾಚರಣೆ' ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಈ ನಿಟ್ಟಿನಲ್ಲಿ ದಾನಿಗಳಿಂದ 60 ಬಾಟಲ್ ರಕ್ತ ಸಂಗ್ರಹಿಸಿ ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿಗೆ ನೀಡುವ ಮೂಲಕ ರಕ್ತದಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ, ತಾಲೂಕು ಕಸಾಪ, ಕಜಾಪ, ತಾಲೂಕು ಸರ್ಕಾರಿ ನೌಕರರ ಸಂಘ, ಹಳ್ಳಿ ಜನಪದ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿ ಡಾ.ಮಹೇಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿನನಿತ್ಯ ನಡೆಯುತ್ತಿರುವ ಅಪಘಾತ, ದುರ್ಘಟನೆಗಳಲ್ಲಿ ಅನೇಕ ಮಂದಿಗೆ ರಕ್ತದ ಅನಿವಾರ್ಯತೆ ಇದೆ. ದಿನೇ ದಿನೇ ರಕ್ತದ ಬೇಡಿಕೆ ಹೆಚ್ಚುತ್ತಲೇ ಇದೆ ಎಂದರು.
ತಹಶೀಲ್ದಾರ್ ಚಂದ್ರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾಜ್, ಸಂಸ್ಕೃತಿ ಟ್ರಸ್ಟ್ನ ಅಧ್ಯಕ್ಷ ಎಚ್.ಎಸ್.ನಾಗೇಶಾಚಾರ್, ಕಂದಾಯ ಅಧಿಕಾರಿ ರಜನಿಕಾಂತರೆಡ್ಡಿ, ತಾಲೂಕು ಕಸಾಪ ಅಧ್ಯಕ್ಷ ಕೆ.ಆರ್.ರವಿಕಿರಣ್, ಸಂಪತ್ಕುಮಾರ್, ಉಮಾಶಂಕರ್, ಮುರಾರಿ, ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

