ಆಧುನಿಕತೆ ಸೋಗಿನಲ್ಲಿ ನಶಿಸುತ್ತಿದೆ ಜನಪದ ಕಲೆ, ಸಂಸ್ಕೃತಿ: ರುದ್ರಪ್ಪ
ನೆಲಮಂಗಲ: ಆಧುನಿಕತೆಯ ಸೋಗಿನಲ್ಲಿ ಜಾನಪದ ಕಲೆ, ಸಂಸ್ಕೃತಿ ನಶಿಸುತ್ತಿರುವುದು ವಿಷಾದನೀಯ ಎಂದು ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ರುದ್ರಪ್ಪ ತಿಳಿಸಿದರು. ಅವರು ಭಾನುವಾರ ಪಟ್ಟಣದ ಸದಾಶಿವನಗರದ ರಂಗ ಶಿಕ್ಷಣ ಸಭಾಂಗಣದಲ್ಲಿ ಅಂಜನಾದ್ರಿ ಕಲಾನಿಕೇತನ ಟ್ರಸ್ಟ್ ಅನ್ನು ಉದ್ಘಾಟಿಸಿ ಮಾತನಾಡುತ್ತಾ ಜಾನಪದ ಕಲೆಯ ಸೊಗಡು ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಾಗಿದೆ. ಆದರೆ ಯುವಕರು ದೃಶ್ಯ ಮಾಧ್ಯಮಗಳತ್ತ ಆಸಕ್ತಿ ತೋರಿ ಜಾನಪದ ಕಲೆಗಳು ಅವನತಿಯ ಅಂಚಿನಲ್ಲಿವೆ. ಆದ್ದರಿಂದ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಹೇಳಿದರು.
ರಂಗ ಶಿಕ್ಷಣ ಕೇಂದ್ರ ಸಿದ್ದರಾಜು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ನೂತನ ಟ್ರಸ್ಟ್‌ನ ಸಂಸ್ಥಾಪಕರಾದ ಜಿ.ಎನ್. ಕನಕರಾಜು ಸುಮಾರು ವರ್ಷಗಳಿಂದ ರಂಗಭೂಮಿ ಕಲಾವಿದರಾಗಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಸ್ಥೆಯೊಂದನ್ನು ಕಟ್ಟಿರುವುದು ಅಭಿನಂದನಾರ್ಹ ವಿಚಾರವೆಂದರು. ವೇದಿಕೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಎಚ್.ದಿನೇಶ್, ಅಧ್ಯಾಪಕ ಗಂಗರಾಜು, ಪ್ರಾಂಶುಪಾಲ ನೆಗಳೂರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

