ಕನ್ನಡಿಗರಿಗೆ ಅನ್ಯಾಯ
ಬೆಂಗಳೂರು: ಬಹುರಾಷ್ಟ್ರೀಯ ಕಂಪನಿಗಳಿಗೆ ರಿಯಾಯಿತಿ ದರದಲ್ಲಿ ನಾಡಿನ ನೆಲ, ಜಲ, ವಿದ್ಯುತ್ ಹಾಗೂ ತೆರಿಗೆ ವಿನಾಯಿತಿ ನೀಡುವ ರಾಜ್ಯ ಸರ್ಕಾರ ಸ್ಥಳೀಯರಿಗೆ ಉದ್ಯೋಗ ನೀಡುವ ಯಾವುದೇ ಕಾನೂನನ್ನು ರೂಪಿಸದೆ ಕನ್ನಡಿಗರಿಗೆ ಅನ್ಯಾಯವೆಸಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಆರೋಪಿಸಿದೆ. ಇದರಿಂದ ಉದ್ಯೋಗಗಳು ಹೊರ ರಾಜ್ಯದವರ ಪಾಲಾಗುತ್ತಿವೆ. ಕನ್ನಡಿಗರು ನಿರುದ್ಯೋಗಿಗಳಾಗುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸ್ಥಾಪಿತವಾಗಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.50ರಷ್ಟು ಹುದ್ದೆ ಮೀಸಲಿಡಲು ಸೂಕ್ತ ಕಾನೂನು ರೂಪಿಸಬೇಕೆಂದು ಸಮಿತಿ ಆಗ್ರಹಿಸಿದೆ. ಐಟಿಬಿಟಿಯಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಲು ಸೂಕ್ತ ಕಾನೂನು ರೂಪಿಸುವಂತೆ ಒತ್ತಾಯಿಸಿ ಶೀಘ್ರದಲ್ಲೇ ಸಾಹಿತಿಗಳು, ಕನ್ನಡ ಪರ ಹೋರಾಟಗಾರರ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಕರೆದೊಯ್ದು ಒತ್ತಾಯಿಸಲಾಗುವುದು ಎಂದು ಸಮಿತಿ ಹೇಳಿದೆ.
ಪ್ರತಿಭಾ ಪುರಸ್ಕಾರ
ಬೆಂಗಳೂರು: ರಾಜ್ಯ ಮಾಧ್ಯಮಿಕ ಸಂಘ, ಬೆಂಗಳೂರು ಉತ್ತರ ಜಿಲ್ಲಾ ಘಟಕವು ಕಳೆದ ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದೆ. ಬೆಂಗಳೂರು ಉತ್ತರ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಹೆಸರು, ಪಡೆದ ಅಂಕ, ಮನೆ ವಿಳಾಸ, ಶಾಲಾ ವಿಳಾಸಗಳನ್ನು ಪ್ರೌಢಶಾಲಾ ಮುಖ್ಯಸ್ಥರಿಂದ ದೃಢೀಕರಿಸಿ ಕಳುಹಿಸಬೇಕು. ಜೂ.20ರ ಒಳಗೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ನಂ-55, ಯಾದವ ಸ್ಕೃತಿ, 1ನೇ ಮುಖ್ಯರಸ್ತೆ, ಶೇಷಾದ್ರಿಪುರಂ, ಬೆಂಗಳೂರು 560 020 ಈ ವಿಳಾಸಕ್ಕೆ ತಲುಪಿಸಬೇಕು.
ಅರ್ಜಿ ಆಹ್ವಾನ
ಬೆಂಗಳೂರು: 2012-13ನೇ ಶೈಕ್ಷಣಿಕ ವರ್ಷ ಮಾರ್ಚ್- ಏಪ್ರಿಲ್ 2013ರಲ್ಲಿ ನಡೆದ ಕರ್ನಾಟಕ ರಾಜ್ಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ಆದಿಜಾಂಬವ/ಮಾತಂಗ (ಮಾದಿಗ) ಸಮಾಜದ ವಿದ್ಯಾರ್ಥಿಗಳಿಗೆ ಕರ್ನಾಟಕ ಆದಿಜಾಂಬವ ವಿದ್ಯಾಭಿವೃದ್ಧಿ ಟ್ರಸ್ಟ್ 'ಪ್ರತಿಭಾಪುರಸ್ಕಾರ' ನೀಡಿ ಸನ್ಮಾನಿಸುತ್ತದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ಪ್ರತಿಗಳು, ಈಗ ವ್ಯಾಸಂಗ ಮಾಡುತ್ತಿರುವ ಕಾಲೇಜು, ತರಗತಿ, ಈಗಿನ ವಿಳಾಸ, ಇತರೆ ವಿವರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ವಿಳಾಸ: ಪ್ರಧಾನ ಕಾರ್ಯದರ್ಶಿ, ಆದಿಜಾಂಬವ ವಿದ್ಯಾಭಿವೃದ್ಧಿ ಟ್ರಸ್ಟ್, ಆದಿಜಾಂಬವ ವಿದ್ಯಾರ್ಥಿ ನಿಲಯದ ಕಟ್ಟಡ, ಮಾಗಡಿ ಮುಖ್ಯರಸ್ತೆ, ಪೋಸ್ಟ್ ಬಾಕ್ಸ್ ಸಂಖ್ಯೆ-2308, ಬೆಂಗಳೂರು 560023.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

