'ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಗತ್ಯ'
ವಿಜಯಪುರ: ಬಾಲಕಾರ್ಮಿಕ ಪದ್ಧತಿಯು ಒಂದು ಜಟಿಲವಾದ ಜ್ವಲಂತ ಸಮಸ್ಯೆಯಾಗಿದ್ದು, ಇದರ ನಿರ್ಮೂಲನೆಗಾಗಿ ಎಲ್ಲರೂ ಪ್ರಯತ್ನಿಸಬೇಕು ಎಂದು ವಿಜಯಪುರದ ಜೆಸಿಐ ಮಾಜಿ ಅಧ್ಯಕ್ಷ ವಿ.ಎನ್. ರಮೇಶ್ ತಿಳಿಸಿದರು.
ಅವರು ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಾಲ ಕಾರ್ಮಿಕ ದಿನಾಚರಣೆಯಲ್ಲಿ ಕಸಾಪ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. ವಿಶ್ವದಲ್ಲಿ 4ಕೋಟಿಗೂ ಹೆಚ್ಚು ಬಾಲಕಾರ್ಮಿಕರಿದ್ದು ಅದರಲ್ಲಿ ಅರ್ಧದಷ್ಟು ಬಾಲಕಾರ್ಮಿಕರು ಭಾರತದಲ್ಲಿರುವುದು ವಿಷಾದನೀಯ. ಇದನ್ನು ಹೋಗಲಾಡಿಸಲು ಸರ್ಕಾರದ ಜೊತೆ ಜೊತೆಗೆ ಎಲ್ಲಾ ಸಂಘ ಸಂಸ್ಥೆಗಳ ಸಾರ್ವಜನಿಕರ ಇಚ್ಛಾಶಕ್ತಿ ಇದ್ದಾಗ ಮಾತ್ರ ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ರಮೇಶ್ ರಚಿಸಿರುವ ಬಾಲ ಕಾರ್ಮಿಕತೆಯ ವಿಮೋಚನೆಗಾಗಿ ಮುಕ್ತಿ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಈ ಕೃತಿಯಲ್ಲಿ ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಎಳೆ ಎಳೆಯಾಗಿ ಚಿತ್ರಿಸಲಾಗಿದೆ.
ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು. ಕಾರ್ಮಿಕ ಇಲಾಖೆಯ ಅಧೀನ ಕಾರ್ಯದರ್ಶಿ ಸಂಜೀವ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಚಿ.ಮಾ. ಸುಧಾಕರ್, ದೇವನಹಳ್ಳಿ ತಾಲೂಕು ಕಸಾಪ ಅಧ್ಯಕ್ಷ ರಾಜ್ಗೋಪಾಲ್, ಕಾರ್ಯದರ್ಶಿ ಚಂದ್ರಶೇಖರ್ ಹಡಪದ್, ಪಟ್ಟಣದ ಕಸಾಪ ಕಾರ್ಯದರ್ಶಿ ಎ.ಬಿ.ಪರಮೇಶ್, ಶೃಂಗೇರಿ ಶಾರದಾ ಶಾಲೆಯ ಅಧ್ಯಕ್ಷೆ ಚಂದ್ರಮುಖಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

