ಬೆಂಗಳೂರು ಗ್ರಾಮಾಂತರ

ಪತ್ರಕರ್ತರ ಸಂಘದ ಭವನಕ್ಕೆ ಸೂಕ್ತ ಸ್ಥಳಾವಕಾಶ ಒದಗಿಸಿ: ಸಚಿವ ಜಾರ್ಜ್

Published On :

ರಾಮನಗರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳಾವಕಾಶ ಒದಗಿಸಿ, ಶೀಘ್ರ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.
ಪತ್ರಕರ್ತರ ಭವನ ನಿರ್ಮಾಣಕ್ಕೆ ರು.25 ಲಕ್ಷ ಬಿಡುಗಡೆಗೊಂಡು 2 ವರ್ಷ ಕಳೆದರೂ ಸೂಕ್ತ ಸ್ಥಳಾವಕಾಶ ಒದಗಿಸದ ಬಗ್ಗೆ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಗಮನ ಸೆಳೆದಾಗ ಅವರು ಜಿಲ್ಲಾಡಳಿತದಿಂದ ವಿವರಣೆ ಪಡೆದರು.
ಜಾಗದ ವಿಷಯವಾಗಿ ಏನೇ ತಕರಾರು ಇದ್ದರೂ ಬಗೆ ಹರಿಸಿ, ಆದಷ್ಟು ಜರೂರಾಗಿ ಸ್ಥಳಾವಕಾಶ  ಒದಗಿಸಬೇಕು. ಈ ವಿಷಯದಲ್ಲಿ ವಿಳಂಬ ಬೇಡ. ಮುಂದಿನ ಸಭೆ ವೇಳೆಗೆ ಜಾಗ ಗೊತ್ತುಪಡಿಸಿ, ಕಾಮಗಾರಿಗೆ ಚಾಲನೆ ನೀಡಲು ಸಿದ್ಧತೆ ಕೈಗೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.