ಬೆಂಗಳೂರು ಗ್ರಾಮಾಂತರ

ಆಟೋ ಚಾಲಕರಿಗೆ ವಿಮಾ ಬಾಂಡ್ ವಿತರಣೆ

Published On :

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಲಿಯ ರಾಜ್ಯ ಖಾಸಗಿ, ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯಡಿ ದೊಡ್ಡಬಳ್ಳಾಪುರದ ಫಲಾನುಭವಿ ಆಟೋ ಚಾಲಕರುಗಳಿಗೆ ವಿಮಾ ಬಾಂಡ್‌ಗಳನ್ನು ವಿತರಿಸಲಾಯಿತು.
ಇಲ್ಲಿನ ಕೊಂಗಾಡಿಯಪ್ಪ ಕಾಲೇಜು ಸಮೀಪ ಇರುವ ಸಿಪಿಐ(ಎಂ) ಕಚೇರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ ರೇಣುಕಾರಾಧ್ಯ ಮತ್ತು ಎಆರ್‌ಡಿಯು ಅಧ್ಯಕ್ಷ ಪಿ.ಎ.ವೆಂಕಟೇಶ್ ಫಲಾನುಭವಿಗಳಿಗೆ ವಿಮಾ ಬಾಂಡ್‌ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಸಿಐಟಿಯು ಸಂಘಟನೆಯ ಹಲವು ಹೋರಾಟಗಳ ಫಲವಾಗಿ ಕಾರ್ಮಿಕ ಇಲಾಖೆ ಆಟೋ ಚಾಲಕರಿಗೆ ಕಲ್ಯಾಣ ಮಂಡಲಿ ರಚಿಸಿದೆ. ಇದರ ಭಾಗವಾಗಿ ಆಟೋರಿಕ್ಷಾ ಚಾಲಕರಿಗೆ ಅಪಘಾತ ಪರಿಹಾರ ವಿಮೆಯನ್ನು ಮಂಡಲಿ ನೀಡುತ್ತಿದೆ. ಚಾಲಕರು ಆಟೋ ಚಾಲನೆ ಮಾಡುವಾಗ, ಕರ್ತವ್ಯದ ವೇಳೆಯಲ್ಲಿ ಅಪಘಾತಕ್ಕೀಡಾಗಿ ಮರಣ ಹೊಂದಿದರೆ ಅಥವಾ ಶಾಶ್ವತ, ತಾತ್ಕಾಲಿಕ ಆಂಗಿಕ ದುರ್ಬಲತೆ ಹೊಂದಿದರೆ ಈ ಯೋಜನೆಯ ಫಲಾನುಭವಿಗಳಾಗಬಹುದು. ಫಲಾನುಭವಿಗಳಿಗೆ ಈ ಯೋಜನೆಯಿಂದ ಗರಿಷ್ಠ 2 ಲಕ್ಷ ಪರಿಹಾರ ದೊರೆಯುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘದ ಕಾರ್ಯದರ್ಶಿ ಷೇಕ್ ಮುಸ್ತಾಫಾ, ಖಜಾಂಚಿ ಇನಾಯತ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು, ಫಲಾನುಭವಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.