ಕಾಂಗ್ರೆಸ್ಗೆ ಅಧಿಕಾರ ನೀಡಿದ್ದಕ್ಕೆ ಬಸ್ ದರದ ಬರೆ: ಕಟು ಟೀಕೆ
ಕನಕಪುರ: ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಗೆಲ್ಲಿಸಿದ ಬಳುವಳಿಯಾಗಿ ಬಸ್ ಪ್ರಯಾಣ ದರ ಏರಿಕೆ ಕಾಣಿಕೆಯನ್ನು ಸರ್ಕಾರ ನೀಡಿದೆ ಎಂದು ಜಯಕರ್ನಾಟಕ ಸಂಘಟನೆಯ ಮಾಜಿ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಟೀಕಿಸಿದ್ದಾರೆ. ಸಮಾಜವಾದಿ ಹಿನ್ನೆಲೆಯ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಂಡಾಗ ಜನರು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದರು. ಅಂತೆಯೇ ರು.ಗೆ ಕೆಜಿ ಅಕ್ಕಿ, ಹಾಲಿಗೆ 2 ರು.ಪ್ರೋತ್ಸಾಹಧನ ಮೊದಲಾದವುಗಳನ್ನು ಪ್ರಮಾಣ ವಚನ ದಿನದಂದೇ ಘೋಷಿಸಿ ಅಗ್ಗದ ಪ್ರಚಾರ ಪಡೆದುಕೊಂಡರು. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಗೋಸುಂಬೆ ಬಣ್ಣವನ್ನು ಕಾಂಗ್ರೆಸ್ ತೋರಿದೆ. ಹಾಲಿನ ಬೆಲೆ ಏರಿಕೆಯ ಬರೆಯನ್ನು ಬಡವರು ಹಾಗೂ ಮಧ್ಯಮವರ್ಗದ ಜನರ ಮೇಲೆಳೆದ ಸರ್ಕಾರ ಬೆನ್ನಹಿಂದೆಯೇ ಬಸ್ ದರ ಏರಿಕೆಯ ಬಾಸುಂಡೆ ಬಾರಿಸಿದೆ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕೇಂದ್ರಸರ್ಕಾರವೂ ಕೂಡಾ ಪದೇಪದೇ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಅಡ್ಡಾದಿಡ್ಡಿ ಏರಿಸುತ್ತಿದ್ದು ಮುಂಬರುವ ದಿನಗಳಲ್ಲಿ ಜನರ ಬದುಕು ಇನ್ನೂ ದುರ್ಭರವಾಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಆಕಾಶ್ ಹಾಸ್ಪಿಟಲ್ ಉದ್ಘಾಟನೆ ಇಂದು
ದೇವನಹಳ್ಳಿ: ಇಲ್ಲಿನ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಶಾಲಾ ಆವರಣದಲ್ಲಿರುವ ಆಕಾಶ್ ಆಸ್ಪತ್ರೆಯ ಉದ್ಘಾಟನೆಯನ್ನು ಬೆಂಗಳೂರು ಕೆನರಾ ಬ್ಯಾಂಕ್ ಮ್ಯಾನೇಜಿಂಗ್ ಡೈರಕ್ಟರ್ ರಾಜೀವ್ ಕಿಶೋರ್ ಬುಧವಾರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

