ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲಿ ಸಿಲಿಂಡರ್ ಸ್ಫೋಟ: ಆತಂಕ

Published On :

ದೊಡ್ಡಬಳ್ಳಾಪುರ, ಜೂ.18: ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅನುಗ್ರಹ ಮೆಡಿಕಲ್ಸ್ ಕಾರ್ಖಾನೆಯಲ್ಲಿ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡ ನಾಲ್ವರೂ ಸೇರಿದಂತೆ 7 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಕಾರ್ಮಿಕರಾದ ಆನಂದ್, ವಿರೂಪಾಕ್ಷ, ಶೇಖರಪ್ಪ ಮತ್ತು ಚೆನ್ನಪ್ಪ ಎಂಬುವವರು ಗಾಯಗೊಂಡಿದ್ದಾರೆ.
ಅವರಿಗೆ ಇಲ್ಲಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ನಾಗೇಶ್, ಸಿದ್ಧರಾಮಪ್ಪ, ವೆಂಕಟೇಶಯ್ಯ ಎಂಬುವವರಿಗೂ ಸಣ್ಣಪುಟ್ಟಗಾಯಗಳಾಗಿವೆ.
ಘಟನೆ ವಿವರ: ಮಂಗಳವಾರ ಮಧ್ಯಾಹ್ನ 11.30ರ ಸುಮಾರಿನಲ್ಲಿ ಔಷಧಿ ಕಲಸುವ ಸಿಲಿಂಡರ್‌ನ ಹೆಚ್ಚುವರಿ ಗಾಳಿ ಸಿಲಿಂಡರ್‌ನಿಂದ ಹೊರಬರದೆ ಬ್ಲಾಕ್ ಆದ ಕಾರಣ ಸಿಲಿಂಡರ್ ಸ್ಫೋಟಗೊಂಡಿದೆ.
ಪರಿಣಾಮ ಸ್ಥಳದಲ್ಲಿದ್ದ 4 ಮಂದಿ ಕಾರ್ಮಿಕರಿಗೆ ತೀವ್ರ ಮಟ್ಟದ ಸುಟ್ಟಗಾಯಗಳಾಗಿವೆ. ಹೊರಗಡೆ ಇದ್ದ 4 ಕಾರ್ಮಿಕರಿಗೆ ಕೂಡ ಸ್ಫೋಟದ ತೀವ್ರತೆಯಿಂದ ಗ್ಯಾಸ್ ಚೂರುಗಳು ಸಿಡಿದು ಗಾಯಗಳಾಗಿವೆ.
ಸ್ಫೋಟದ ತೀವ್ರತೆಯಿಂದ ಉಂಟಾದ ಭಾರೀ ಶಬ್ದದಿಂದ ಸುತ್ತಮುತ್ತಲಿನ ಕಾರ್ಖಾನೆಯ ಕಾರ್ಮಿಕರೂ ಕಾರ್ಖಾನೆ ಬಳಿ ಜಮಾಯಿಸಿದ್ದರು.
ಕಾರ್ಖಾನೆಯ ಶೀಟುಗಳೂ ಸುಮಾರು 1ಕಿಮೀ ದೂರದ ಕಾರ್ಖಾನೆಗಳ ಮೇಲೆ ಬಿದ್ದಿರುವುದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿದೆ.
ಇಲ್ಲಿನ ಕಾರ್ಖಾನೆಯಲ್ಲಿ ಕಾರ್ಮಿಕ ಸುರಕ್ಷಾ ನಿಯಮಗಳನ್ನು ಪಾಲಿಸದೆ ಇರುವುದೇ ಇಷ್ಟಕ್ಕೆಲ್ಲ ಕಾರಣ ಎನ್ನಲಾಗಿದೆ. ಇಲ್ಲಿನ ಕೆಲವು ಕೆಮಿಕಲ್ಸ್ ಕಾರ್ಖಾನೆಗಳಿಂದ ಇತರೆ ಸಣ್ಣ ಪ್ರಮಾಣದ ಕಾರ್ಖಾನೆಗಳಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪರಿಣಾಮ ಆಗಿಲ್ಲ.
ಈ ಘಟನೆಯಿಂದಾಗಿ ಇಡೀ ಪ್ರದೇಶದಲ್ಲಿ ತೀವ್ರ ಆತಂಕ ಮನೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.