ಬೆಂಗಳೂರು ಗ್ರಾಮಾಂತರ

ಚಿಕೂನ್ ಗುನ್ಯಾ, ಡೆಂಘೀಗೆ ಸೂಕ್ತ ಚಿಕಿತ್ಸೆ

Published On :
ನೆಲಮಂಗಲ: ತಾಲೂಕಿನಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾದಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ತಾಲೂಕು ಆರೋಗ್ಯ ಅಧಿಕಾರಿ ಡಾ.ನರಸಿಂಹಯ್ಯ ತಿಳಿಸಿದ್ದಾರೆ. ಅವರು ಮಂಗಳವಾರ ತಾಲೂಕಿನ ಪಾಪಭೋವಿಪಾಳ್ಯಕ್ಕೆ ಭೇಟಿ ನೀಡಿ ಆ ಗ್ರಾಮದಲ್ಲಿ ಚಿಕೂನ್ ಗುನ್ಯಾದಿಂದ ಬಳಲುತ್ತಿದ್ದು 12 ಜನ ರೋಗಿಗಳಿಗೆ ಚಿಕಿತ್ಸೆ ನೀಡಿ ಮಾತನಾಡುತ್ತಾ ತಾಲೂಕಿನಲ್ಲಿ ಆರೋಗ್ಯ ಶಿಕ್ಷಣ  ಸರ್ವೆ ಮಾಡಿಸಲಾಗಿದೆ. ತಾಲೂಕಿನಲ್ಲಿ ಪಾಪಭೋವಿಪಾಳ್ಯ, ಕೆಂಪಲಿಂಗನಹಳ್ಳಿ, ನರಸಾಪುರ, ಬಸವನಪಾಳ್ಯ, ಮೈಲನಹಳ್ಳಿ, ಬಾಪೂಜಿನಗರ ಗ್ರಾಮಗಳಲ್ಲಿ ಚಿಕೂನ್ ಗುನ್ಯಾ ಹಾಗೂ ಡೆಂಘೀ ಜ್ವರದ ಪ್ರಕರಣಗಳು ದಾಖಲಾಗಿದೆ. ಈ ಗ್ರಾಮಗಳಲ್ಲಿ ವೈದ್ಯರು ಜ್ವರದಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೂಡ ಚಿಕಿತ್ಸೆ ನೀಡುವುದರಿಂದ  ಎಲ್ಲ  ರೋಗಿಗಳು ಆರೋಗ್ಯವಾಗಿದ್ದಾರೆ. ತಾಲೂಕಿನಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ಜ್ವರಕ್ಕೆ ಸಂಬಂದಪಟ್ಟಂತೆ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗುತ್ತದೆ ಎಂದರು. ಈ ಜ್ವರದಿಂದ ಬಳಲುತ್ತಿರುವವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತೇವೆ. ಸಾರ್ವಜನಿಕರು ಈ ಜ್ವರದ ಬಗ್ಗೆ ಯಾರು ಆತಂಕ ಭಯ ಪಡಬಾರದೆಂದು ಮನವಿ ಮಾಡಿದ್ದಾರೆ.  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ ಹಾಗೂ ಗ್ರಾಮಸ್ಥರು  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.