ದೇವನಹಳ್ಳಿಯಲ್ಲಿ ಆಕಾಶ್ ಆಸ್ಪತ್ರೆ ಉದ್ಘಾಟನೆ
ದೇವನಹಳ್ಳಿ: ಇಲ್ಲಿನ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್ ಇಂಟರ್ನ್ಯಾಷನಲ್ ವಿದ್ಯಾಸಂಸ್ಥೆಯ ಆವರಣದಲ್ಲಿರುವ ಆಕಾಶ್ ಆಸ್ಪತ್ರೆ ಉದ್ಘಾಟನಾ ಸಮಾರಂಭವನ್ನು ಆಸ್ಪತ್ರೆಯ ಆಡಳಿತ ಮಂಡಳಿಯವರು ಬುಧವಾರ ಆಯೋಜಿಸಿದ್ದರು.
ಆಸ್ಪತ್ರೆಯ ಉದ್ಘಾಟನೆಯನ್ನು ಕೆನರಾ ಬ್ಯಾಂಕಿನ ಚೇರ್ಮನ್ ಹಾಗೂ ಮ್ಯಾನೇಜಿಂಗ್ ಡೈರಕ್ಟರ್ ರಾಜೀವ್ ಕಿಶೋರ್ ದುಬೆ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ ಇಂತಹ ಉತ್ತಮ ದರ್ಜೆಯ ವೈದ್ಯಕೀಯ ಉಪಕರಣಗಳೊನ್ನಳಗೊಂಡ ಆಸ್ಪತ್ರೆಯನ್ನು ಮುನಿರಾಜು ದಂಪತಿ ಹಾಗೂ ಆಡಳಿತ ಮಂಡಳಿಯವರು ಆರಂಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಭಾಗದ ಜನರಿಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸಾ ಸೌಲಭ್ಯ ದೊರೆಯಬೇಕು ಎಂದರಲ್ಲದೆ ಮುಂದಿನ ದಿನಗಳಲ್ಲಿ ಇದೇ ಸಂಸ್ಥೆಯಿಂದ ವೈದ್ಯಕೀಯ ಕಾಲೇಜು ಸ್ಥಾಪಿಸುವ ಗುರಿಹೊಂದಿದ್ದು ಇದರ ಅಭಿವೃದ್ಧಿಗೆ ಕೆನರಾ ಬ್ಯಾಂಕ್ ಅಗತ್ಯವಾದ ಆರ್ಥಿಕ ಸೌಲಭ್ಯ ನೀಡಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ರವೀಂದ್ರ ಭಂಡಾರಿ ಮಾತನಾಡಿ ನಗರ ಪ್ರದೇಶಗಳಲ್ಲಿ ಶೇ. 20 ರಷ್ಟು ಜನರಿದ್ದು ಶೇ.80 ರಷ್ಟು ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಆದರೆ ಶೇ. 80 ರಷ್ಟು ಜನರಿರುವ ಗ್ರಾಮೀಣ ಪ್ರದೇಶಗಳಲ್ಲಿ ಶೇ.20 ರಷ್ಟು ಮಾತ್ರ ವೈದ್ಯಕೀಯ ಸೌಲಭ್ಯ ಲಭ್ಯಲಾಗುತ್ತಿದೆ ಎಂದರಲ್ಲದೆ ಇಂತಹ ಎಲ್ಲ ರೀತಿಯ ಸೌಲಭ್ಯ ಇರುವ ಉತ್ತಮ ದರ್ಜೆಯ ಸೇವೆಗೆ ಸಿದ್ಧವಾಗಿರುವ ಮುನಿರಾಜು ಪುಷ್ಪ ದಂಪತಿಗಳನ್ನು ಅಭಿನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

