ಮನೆಗೊಂದು ಗಿಡ, ಊರಿಗೊಂದು ವನ ಅಗತ್ಯ
ವಿಜಯಪುರ: ಪರಿಸರ ದಿನಾಚರಣೆ ಕೇವಲ ಸಭೆ ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ ಆಚರಣೆಗೆ ಬರಬೇಕು ಎಂದು ತಾಲ್ಲೂಕು ಕಸಾಪ ಕಾರ್ಯದರ್ಶಿ ವಿ.ಎನ್. ರಮೇಶ್ ತಿಳಿಸಿದರು.
ಪಟ್ಟಣದ ಜೇಸೀಸ್ ಪ್ರೌಢಶಾಲೆಯಲ್ಲಿ ವಿಜಯಪುರ ಕಸಾಪ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ 129ನೇ ಜಯಂತಿ ಆಚರಣೆಯಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರು ಅಪ್ರತಿಮ ಆಡಳಿತಗಾರರಾಗಿದ್ದು ಕನ್ನಡದ ಅಭಿಮಾನಿಯಾಗಿದ್ದರು.ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ಹೊಂದಿದ್ದ ವ್ಯಕ್ತಿ ಆಗಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಟಣದ ಕಸಾಪ ಅಧ್ಯಕ್ಷ ಜೆ.ಆರ್. ಮುನಿವೀರಣ್ಣ ಅವರು ಪರಿಸರ ಸಂರಕ್ಷಣೆಗಾಗಿ ಮನೆಗೊಂದು ಗಿಡ ಊರಿಗೊಂದು ವನ ಬೇಕಾಗಿದೆ. ಕನ್ನಡ ಮತ್ತು ಪರಿಸರ ಉಳಿವಿಗಾಗಿ ಅಭಿಮಾನದಿಂದ ಮಾತ್ರ ಸಾಧ್ಯ. ಯೋಚಿಸಿ, ಸೇವಿಸಿ, ಉಳಿಸಿ ಎಂಬ ಈ ವರ್ಷದ ಪರಿಸರ ಘೋಷಣೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕಾಗಿದೆ ಎಂದರು. ಜಿಲ್ಲಾ ಕಸಾಪ ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್, ತಾಲೂಕು ಕಸಾಪ ಅಧ್ಯಕ್ಷ ಎನ್. ರಾಜ್‌ಗೋಪಾಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಕಾರ್ಯದರ್ಶಿ ಚಂದ್ರಶೇಖರ್
ಹಡಪದ್, ವಿಜಯಪುರ ಜೇಸಿಐ ಅಧ್ಯಕ್ಷ ಬಲಮೂರಿ ಶ್ರೀನಿವಾಸ್, ಶಾಲಾ ಅಧ್ಯಕ್ಷ ಪಿ.ಮುಕುಂದ ರಾವ್, ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

