ಬೆಂಗಳೂರು ಗ್ರಾಮಾಂತರ

ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಶಾಶ್ವತ ಅಂಗವಿಕಲನಾದ ವಿದ್ಯಾರ್ಥಿ

Published On :

ನೆಲಮಂಗಲ: ವಿದ್ಯಾರ್ಥಿಯೋರ್ವನಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಆತ ಶಾಶ್ವತ ವಿಕಲಚೇತನವಾಗಿರುವ ಘಟನೆ ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಅಪಘಾತಕ್ಕೆ ತುತ್ತಾದ ಮೂರನೇ ತರಗತಿ ವಿದ್ಯಾರ್ಥಿ ಪ್ರವೀಣ್ ಕುಮಾರ್ (9) ವರ್ಷದವನಾಗಿದ್ದು, ಈತ ಮೂಲತಃ ಬಿಜಾಪುರ ಜಿಲ್ಲೆಯ ಹಾವಿನಹಾಳ ಗ್ರಾಮದ ಶರಣಪ್ಪ ಮತ್ತು ಅರುಣ ದಂಪತಿ  ಪುತ್ರ. ಈತನ ಪೋಷಕರು ಡಾಬದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಾ ಪೆಮ್ಮನಹಳ್ಳಿ ಗ್ರಾಮದಲ್ಲಿ ಜೀವನ ನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿ ಪ್ರವೀಣ್‌ಕುಮಾರ್ ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಬಲಗೈ ಸಂಪೂರ್ಣ ಕಳೆದುಕೊಂಡು, ಬಲಕಾಲು ಮತ್ತು ಎಡಕಾಲಿನ ಬೆರಳುಗಳು ಕತ್ತರಿಸಿ ಹೋಗಿವೆ. ಈತನಿಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈತನ ಪೋಷಕರು ಆರ್ಥಿಕವಾಗಿ ದುರ್ಬಲರಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲು ತುಂಬಾ ಕಷ್ಟಕರವಾಗಿದೆ ಎಂದು ಪೋಷಕರ ಅಳಲಾಗಿದೆ.
ಈತನ ಆರೋಗ್ಯದ ಸ್ಥಿತಿ ಹೇಗಿದೆ ಎಂದು ಸ್ಥಳೀಯ ಬೆಸ್ಕಾಂ ಅಧಿಕಾರಿಗಳು ಕಾಳಜಿ ವಹಿಸದಿರುವುದಕ್ಕೆ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ದಾಬಸ್‌ಪೇಟೆ ಠಾಣೆಯಲ್ಲಿ ಬೆಸ್ಕಾಂ ಅಧಿಕಾರಿಗಳ  ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.