'ಮಂಜುನಾಥ ಕುಟುಂಬಕ್ಕೆ ರು. 5 ಲಕ್ಷ ಪರಿಹಾರಕ್ಕೆ ಯತ್ನ'
ಸೂಲಿಬೆಲೆ: ಓರೋಹಳ್ಳಿಯಲ್ಲಿ ಆನೆಗಳ ತುಳಿತಕ್ಕೆ ಒಳಗಾಗಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ರು.5 ಲಕ್ಷ ಪರಿಹಾರ ಕೊಡಿಸುವ ಭರವಸೆಯನ್ನು ಹೊಸಕೋಟೆ ಶಾಸಕ ಎನ್.ನಾಗರಾಜ್ ನೀಡಿದ್ದಾರೆ.
ಆನೆಗಳ ದಾಳಿಯ ವಿಷಯ ತಿಳಿದ ಶಾಸಕರು ಮೃತನ ಸ್ವಗ್ರಾಮ ಮೈಲಾಪುರಕ್ಕೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಆನೆಗಳ ದಾಳಿಗೆ ಸಿಕ್ಕಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಸಾವು ಆಘಾತ ನೀಡಿದೆ. ಈ ದುರಂತ ನಡೆಯಬಾರದಿತ್ತು.ಅರಣ್ಯ ಇಲಾಖೆಯಿಂದ ಬರುವ ಪರಿಹಾರ ಧನದೊಂದಿಗೆ ತಾವು ವೈಯುಕ್ತಿಕವಾಗಿ ಪರಿಹಾರವನ್ನು ನೀಡಲು ಬದ್ಧವಾಗಿರುವುದಾಗಿ ಶಾಸಕರು ತಿಳಿಸಿದರು. ತಮಿಳುನಾಡಿನಿಂದ ವಲಸೆ ಬಂದಿರುವ ಆನೆಗಳನ್ನು ಓಡಿಸಲು ಅಗತ್ಯವಾಗಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತವನ್ನು ಕೋರಲಾಗಿದೆ ಎಂದರು. ಇದೇ ವೇಳೆ ವಿಷಯ ತಿಳಿದ ಮಾಲೂರು ಶಾಸಕ ಕೆ.ಎನ್. ಮಂಜುನಾಥ್ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ ಆನೆಗಳ ಬಳಿ ಜನ ತೆರಳದಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಶಂಕರ್, ಉಪವಿಭಾಗಧಿಕಾರಿ ಮಹೇಶ್ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಂಡು ಆನೆಗಳ ತಂಟೆಗೆ ಬ್ರೇಕ್ ಹಾಕಲು ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಜನ ಆನೆಗಳತ್ತ ತೆರಳದಂತೆ ತಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

