ಬೆಂಗಳೂರು ಗ್ರಾಮಾಂತರ

'ಗ್ರಾಮೀಣ ಜನರು ಕಣ್ಣಿನ ಬಗ್ಗೆ ಉದಾಸೀನ ತೋರಬಾರದು'

Published On :

ಸೂಲಿಬೆಲೆ: ಗ್ರಾಮೀಣ ಭಾಗದಲ್ಲಿರುವ ಜನರು ಕಣ್ಣುಗಳ ಬಗ್ಗೆ ಉದಾಸೀನತೆ ತೋರಬಾರದು. ಹಳ್ಳಿಗಾಡಿನಲ್ಲಿ ನಡೆಯುವ ಉಚಿತ ನೇತ್ರ ತಪಾಸಣಿ ಶಿಬಿರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಡಾ.ಸೋಮಶೇಖರಯ್ಯ ಹೇಳಿದರು.
ಸತ್ಯಸಾಯಿ ಆರ್ಗನೈಸೇಷನ್ ಟ್ರಸ್ಟ್  ಹಾಗೂ ಲಯನ್ಸ್ ಕ್ಲಬ್ ಸಂಸ್ಥೆಯಿಂದ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದಯಾನಂದಬಾಬು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇಂಥ ಶಿಬಿರಗಳು ನಡೆಯುವುದರಿಂದ ಹಳ್ಳಿಗಾಡಿನ ಜನತೆಗೆ ತುಂಬಾ ಅನುಕೂಲವಾಗಲಿದೆ. ಹಳ್ಳಿಯ ಜನತೆ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯತನ ಮಾಡದೆ ಇಂಥ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಶಿಬಿರದಲ್ಲಿ 500ಕ್ಕೂ ಹೆಚ್ಚು ಜನ ತಪಾಸಣಿಗೆ ಒಳಪಟ್ಟರು. ಕಾರ್ಯಕ್ರಮದಲ್ಲಿ ಡಾ.ಮನೋಹರ್, ಮೋಹನ್, ವ್ಯವಸ್ಥಾಪಕ ಕದಮ್, ರಮೇಶ್, ಮಂಜುನಾಥ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.