ಅರಣ್ಯ ಬೆಳೆಸಿ, ಪ್ರಕೃತಿ ಕಾಪಾಡಿ
ಕ.ಪ್ರ.ವಾರ್ತೆ, ರಾಮನಗರ, ಜೂ.29
ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಭಾರತದಲ್ಲಿ ಅರಣ್ಯ ಪ್ರದೇಶದ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಇದು ಕಳವಳಕಾರಿ ಸಂಗತಿ ಎಂದು ವಲಯ ಅರಣ್ಯಾಧಿಕಾರಿ ಜಿ.ಸಿ.ಲಿಂಗರಾಜು ವಿಷಾದಿಸಿದರು.
ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯಿಂದ ಶನಿವಾರ ನಡೆದ ವನಮಹೋತ್ಸವ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉತ್ತರಾಖಂಡ್ದಲ್ಲಿ ಸಂಭವಿಸಿರುವ ದುರಂತ, ಜಾಗತಿಕ ತಾಪಮಾನ ಹೆಚ್ಚಳ, ಭೂಕಂಪದಂತಹ ಭೀಕರ ಪ್ರಕೃತಿ ವಿಕೋಪದ ಘಟನೆಗಳು ಮಾನವನ ದುರಾಸೆಯ ಪರಿಣಾಮವೇ ಹೊರತು ಮತ್ತಿನ್ನೇನೂ ಅಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ದೇಶದ ಒಟ್ಟು ಭೂಮಿ ಪೈಕಿ ಶೇ.33ರಷ್ಟು ಅರಣ್ಯ ಇರಬೇಕಿತ್ತು. ಪ್ರಸ್ತುತ ನಮ್ಮ ದೇಶದಲ್ಲಿರುವ ಅರಣ್ಯ ಪ್ರದೇಶದ ಪ್ರಮಾಣ ಶೇಕಡ 19ರಷ್ಟು ಮಾತ್ರ. ಅರಣ್ಯ ಬೆಳೆಸಿ, ಪ್ರಕೃತಿಯ ಸಮತೋಲನ ಕಾಯ್ದುಕೊಳ್ಳಲು ನಾವು ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.
ಜಾಗೃತಿ ಮೂಡಿಸಿ: ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು, ಪೋಷಿಸಿ ಅವನ್ನು ಮರವಾಗಿ ಬೆಳೆಸಬೇಕು. ಅರಣ್ಯ ನಾಶವಾದರೆ ಎದುರಾಗುವ ಪರಿಣಾಮಗಳ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ನೀರು, ಆಹಾರದಷ್ಟೇ ಅರಣ್ಯವೂ ಮುಖ್ಯ ಎನ್ನುವ ಸಂಗತಿಯನ್ನು ಮನದಟ್ಟು ಮಾಡಿಕೊಳ್ಳಬೇಕು ಎಂದು ಲಿಂಗರಾಜು ಹೇಳಿದರು.
ಸಸಿ ನೆಡಿ, ಅರಣ್ಯ ಬೆಳೆಸಿ ಎನ್ನುವ ಸಂದೇಶಗಳನ್ನು ನಾವು ಸಾಕಷ್ಟು ಕಡೆ ನೋಡುತ್ತಿದ್ದೇವೆ. ಆದರೆ, ನಮ್ಮಲ್ಲಿ ಅರಣ್ಯ ಗಣಿಕಾರಿಕೆ ಮತ್ತು ಮರಗಳನ್ನು ಕಡಿಯುವಿಕೆಯಿಂದ ಪರಿಸರವನ್ನು ನಾಶಪಡಿಸುವ ದುಷ್ಕೃತ್ಯವೂ ನಡೆಯುತ್ತಿದೆ ಎಂದು ಅವರು ವಿಷಾದಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ ಅವರು, ಗಿಡ-ಮರಗಳನ್ನು ಬೆಳೆಸಿ ಪರಿಸರ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್.ಕುಮಾರಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಕೆ.ಸುರೇಶ್, ನಾಗಶ್ರೀ, ಆನಂದ್ ಪಿ.ಹೂಗಾಡೆ, ವಕೀಲರ ಸಂಘದ ಅಧ್ಯಕ್ಷ ಟಿ.ಕೆ. ಶಾಂತಪ್ಪ, ಪದಾಧಿಕಾರಿಗಳಾದ ಎಂ.ಜಿ. ಮಹೇಶ್, ಚಂದ್ರಶೇಖರ್ ಭಾಗವಹಿಸಿದ್ದರು.
ಗೋಪಾಲಕೃಷ್ಣ ಸ್ವಾಗತಿಸಿದರು. ಸಿಂಧೂ ನಿರೂಪಿಸಿದರು. ಕೆ.ಆರ್.ಅಮೂಲ್ಯ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

