ಬೆಂಗಳೂರು ಗ್ರಾಮಾಂತರ

ಉಚಿತ ಆರೊಗ್ಯ ಶಿಬಿರದ ಉಪಯೋಗ ಮಾಡಿಕೊಳ್ಳಿ

Published On :

ಕ.ಪ್ರ.ವಾರ್ತೆ ರಾಮನಗರ  ಜೂ.30
ಸಂಘ-ಸಂಸ್ಥೆಗಳು ಆಯೋಜಿಸುವ ಉಚಿತ ಆರೊಗ್ಯ ಶಿಬಿರಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆರ್.ಕುಮಾರಸ್ವಾಮಿ ತಿಳಿಸಿದರು.
ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ರೋಟರಿ, ನಗರಸಭೆ ಮತ್ತು ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದಿಂದ ಭಾನುವಾರ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರ್ಥಿಕವಾಗಿ ದುರ್ಬಲರಾಗಿರುವ ಗ್ರಾಮೀಣರು ಮತ್ತು ನಗರಗಳಲ್ಲಿ ವಾಸಿಸುವ ಜನತೆ ಅನಾರೋಗ್ಯಕ್ಕೀಡಾದಾಗ ಸೂಕ್ತ ಸಮಯದಲ್ಲಿ ತಪಾಸಣೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಸೇರಿದಂತೆ ಹಲವಾರು ಸೇವಾ ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಬಡವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಡಾ.ದಾಸೇಗೌಡ ಮಾತನಾಡಿ ಸಂಘ ಸಂಸ್ಥೆಗಳ ನೆರವಿನಿಂದ ಮಹಾವಿದ್ಯಾಲಯ ನೇತ್ರ ತಪಾಸಣಾ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ, ಸಾವಿರಾರು ರೋಗಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ನೇತ್ರ ಶಸ್ತ್ರ ಚಿಕಿತ್ಸೆಗೆ ಅಧುನಿಕ ತಂತ್ರಜ್ಞಾನವನ್ನು ತಮ್ಮ ಸಂಸ್ಥೆಯೂ ಅಳವಡಿಸಿಕೊಂಡಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾದ ವ್ಯಕ್ತಿಗಳು ಕೇವಲ ಎರಡು ದಿನಗಳಲ್ಲಿ ದೈನಂದಿನ ಕರ್ತವ್ಯದಲ್ಲಿ ತೊಡಗಿಕೊಳ್ಳಬಹುದು ಎಂದು ತಿಳಿಸಿದರು.
27 ಮಂದಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು, ಇವರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು ಎಂದು ರೋಟರಿ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ.
ಶಿಬಿರದ ಚೇರ್‌ಮನ್ ಸಿದ್ದಪ್ಪಾಜಿ, ಕಿಮ್ಸ್ ವೈದ್ಯರಾದ ಡಾ.ಜಯಂತಿ, ಡಾ.ಸ್ಪರ್ಶ, ಡಾ.ತೃಪ್ತಿ, ರಾಮಕೃಷ್ಣಪ್ಪ, ಶ್ರೀನಿವಾಸ್, ರೋಟರಿ ಪ್ರಮುಖರಾದ ಅಲ್ತಾಫ್ ಅಹಮದ್, ಶಂಕರಲಿಂಗೇಗೌಡ  ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.