ಬೆಂಗಳೂರು ಗ್ರಾಮಾಂತರ

ಕಾಮಗಾರಿಗಳಿಗೆ ಚಾಲನೆ

Published On :

ಹೊಸಕೋಟೆ: ತಾಲೂಕಿನ ಹಸಿಗಾಳ ಗ್ರಾಮದಲ್ಲಿ ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಸಚಿವ ಬಚ್ಚೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿ ಪಶು ಆಸ್ಪತ್ರೆ ಕಟ್ಟಡಕ್ಕೆ 16 ಲಕ್ಷ, ಅಂಗನವಾಡಿ ಕಟ್ಟಡಕ್ಕೆ 4 ಲಕ್ಷ, ದಾಸೋಹ ಕೊಠಡಿಗಳಿಗೆ 24 ಲಕ್ಷ ಮಂಜೂರಾಗಿರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಎಮ್.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ವೆಂಕಟಲಕ್ಷ್ಮಮ್ಮ, ತಾಲೂಕು ಪಂಚಾಯ್ತಿ ಸದಸ್ಯ ಬಿ.ವಿ.ರಾಜಶೇಕರ್ ಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶ್‌ಗೌಡ, ಶಾಲಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪಿಳ್ಳೇಗೌಡ ಮುಂತಾದ ಗಣ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.