ನಗರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ಶಾಸಕ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಹೇಳಿದರು.
ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಪಾದಯಾತ್ರೆ ಮತ್ತು ಮತಯಾಚನೆಯಲ್ಲಿ ತೊಡಗಿದ್ದ ಅವರು ವಾರ್ಡುಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಮಾತನಾಡಿದರು.
ಈಗಾಗಲೇ ನಗರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಕಳೆದ 5 ವರ್ಷಗಳಲ್ಲಿ ಪೂರ್ಣಗೊಂಡಿವೆ.
ನಗರಸಭೆಯ ಕಳೆದ 5 ವರ್ಷದ ಅವಧಿಯಲ್ಲಿ ಆಡಳಿತ ನಡೆಸಿದ ಜನ ತಾವು ಏನು ಮಾಡಿದ್ದಾರೆ ಎಂಬುದನ್ನು ನಗರದ ಜನತೆಗೆ ಸ್ಪಷ್ಟಪಡಿಸಬೇಕು. ಬಿಜೆಪಿ ನೇತೃತ್ವದಲ್ಲಿ ಸಿಎಂ ವಿಶೇಷಾನುದಾನ ತಂದು ನಗರದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.
ಕುಡಿಯುವ ನೀರಿನ ಬವಣೆ ನೀಗಿಸಲು ಹಲವು ಕಾರ್ಯಯೋಜನೆಗಳನ್ನು ಆರಂಭಿಸಲಾಗಿದೆ. ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಕೊಳಗೇರಿಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದರು. ಕರ್ನಾಟಕ ರಾಜ್ಯ ರೇಷ್ಮೇ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮತ್ತು ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಮಾತನಾಡಿ ಕೇವಲ ರಾಜಕೀಯ ಹಿತಾಸಕ್ತಿಯಿಂದ ವಿರೋಧ ಪಕ್ಷಗಳು ಮಾಡುವ ಟೀಕೆಗೆ ಜನ ತಲೆಕೆಡಿಸಿಕೊಳ್ಳಬೇಕಿಲ್ಲ. ಯಾವತ್ತೂ ಅಭಿವೃದ್ಧಿಯ ದೃಷ್ಟಿಕೋನ ಹೊಂದಿರುವ ಪಕ್ಷವಾದ ಬಿಜೆಪಿಯನ್ನು ನಗರಸಭೆಯಲ್ಲಿ ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಿದೆ.
ಬಿಜೆಪಿ ಸ್ಪರ್ಧಿಸಿರುವ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಶಾಸಕರ ಕೈ ಬಲಪಡಿಸಬೇಕು. ತನ್ಮೂಲಕ ಅಭಿವೃದ್ಧಿಯ ಹೊಸಶಕೆ ಆರಂಭವಾಗಲಿದೆ ಎಂದರು.
ಚುನಾವಣಾ ಪ್ರಚಾರ ಸಭೆಗಳಲ್ಲಿ ಜಿ.ಪಂ ಉಪಾಧ್ಯಕ್ಷ ಎನ್.ಹನುಮಂತಗೌಡ, ಎಪಿಎಂಸಿ ಉಪಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನಪ್ಪ, ಬಿಜೆಪಿ ತಾಲೂಕು ಮುಖಂಡ ನಾಗರಾಜ್, ನಗರಾಧ್ಯಕ್ಷ ಗೋಪಿ, ಡಿ.ಎಲ್.ಸತ್ಯನಾರಾಯಣ್, ತಾ.ಪಂ ಅಧ್ಯಕ್ಷ ನಾಗರಾಜ್ ಸೇರಿದಂತೆ ವಿವಿಧ ವಾರ್ಡುಗಳ ಬಿಜೆಪಿ ಅಭ್ಯರ್ಥಿಗಳು, ಬೆಂಬಲಿಗರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

