ಬದಲಾವಣೆಗಾಗಿ ಜೆಡಿಎಸ್ ಬೆಂಬಲಿಸಿ: ಚನ್ನಿಗಪ್ಪ
ದೊಡ್ಡಬಳ್ಳಾಪುರ: ಆಡಳಿತದಲ್ಲಿ ಸಮಗ್ರ ಬದಲಾವಣೆ ತರಲು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ.ಚನ್ನಿಗಪ್ಪ ಹೇಳಿದರು.
ಶುಕ್ರವಾರ ದೊಡ್ಡಬಳ್ಳಾಪುರ ನಗರಸಭೆಯ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಇಲ್ಲಿನ ಮುತ್ಯಾಲಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಗರಸಭೆಯಲ್ಲಿ ಆಡಳಿತ ವ್ಯವಸ್ಥೆ ಜಡ್ಡುಗಟ್ಟಿದೆ. ಯಾವುದೇ ಹಂತದಲ್ಲೂ ಜನಸಾಮಾನ್ಯರ ಕೆಲಸಗಳು ಸುಗಮವಾಗಿ ಜರುವ ಯೋಜನೆಗಳಿಲ್ಲ. ಆಡಳಿತಪಕ್ಷ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ ಪರಿಣಾಮ ದೊಡ್ಡಬಳ್ಳಾಪುರ ನಗರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ, ಸಂಪೂರ್ಣ ಬಹುಮತದಿಂದ ಆಡಳಿತ ಹೊಂದುವಂತೆ ಜನ ಆಶೀರ್ವದಿಸಬೇಕಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ದೊಡ್ಡಬಳ್ಳಾಪುರ ಜನರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಲು ಜೆಡಿಎಸ್ನಿಂದ ಸ್ಪರ್ಧಿಸಿರುವ ಎಲ್ಲ 29 ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ತಾ.ಜೆಡಿಎಸ್ ಅಧ್ಯಕ್ಷ ಆರ್.ಗೋವಿಂದರಾಜು, ನಗರಾಧ್ಯಕ್ಷ ಟಿ.ಎನ್. ಪ್ರಭುದೇವ್, ಮುಖಂಡರಾದ ಚಿಕ್ಕರಾಮಕೃಷ್ಣಪ್ಪ, ಚುಂಚೇಗೌಡ, ಪುಟ್ಟಬಸವರಾಜು, ಆನಂದ್ ಸೇರಿದಂತೆ ಪಕ್ಷದ ಅಭ್ಯರ್ಥಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.
ನಂತರ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಅಭ್ಯರ್ಥಿಗಳು ಮತ್ತು ಮುಖಂಡರ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಮತಯಾಚನೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

