ಬೆಂಗಳೂರು ಗ್ರಾಮಾಂತರ

ಜಾತ್ಯತೀತ ನಿಲವೇ ಕಾಂಗ್ರೆಸ್ ಗೆಲವಿಗೆ ಶ್ರೀರಕ್ಷೆ

Published On :

ಚನ್ನಪಟ್ಟಣ:  ನಮ್ಮ ಪಕ್ಷದ ಅಭಿವೃದ್ಧಿಪರ ಆಡಳಿತ, ಜಾತ್ಯತೀತ ನಿಲವೇ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲು ಸಹಕಾರಿಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಒಂದನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡ ಅವರು, ಈಭಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿದರೆ ನಗರದ ಸರ್ವಾಂಗೀಣ ಅಭಿವೃದ್ಧಿ ಕೈಗೊಂಡು ಚನ್ನಪಟ್ಟಣವನ್ನು ಮಾದರಿ ನಗರ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬೊಂಬೆನಗರಿಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲು ಮತದಾರರು ಈ ಚುನಾವಣೆಯ ಮೂಲಕ ನಮಗೆ ಆಶೀರ್ವದಿಸ ಬೇಕೆಂದು ಮನವಿಮಾಡಿದರು.
ಸಾಮೂಹಿಕ ನಾಯಕತ್ವ: ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸುತ್ತಿದ್ದು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯೋಗೇಶ್ವರ್ ಕಾರ್ಯನಿಮಿತ್ತ ಇಂದಿನ ಪ್ರಚಾರದಲ್ಲಿ ಪಾಲ್ಗೊಂಡಿಲ್ಲ. ನಾವು ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ ಎಂದರು. ಕಾಂಗ್ರೆಸ್ ಸಾಮೂಹಿಕ ನಾಯಕತ್ವಕ್ಕೆ ಜಯಸಿಗಲಿದ್ದು ಈ ಬಾರಿ ನಮ್ಮ ಪಕ್ಷ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ, ಈ ಚುನಾವಣೆಯೊಂದಿಗೆ ಕಾಂಗ್ರೆಸ್ ಗೆಲವಿನ ಅಧ್ಯಾಯ ಆರಂಭ ಗೊಳ್ಳಲಿದೆ ಎಂದರು.
ಪ್ರಚಾರ ಕಾರ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ. ವೀರೇಗೌಡ, ಶಿವಮಾದು, ಒಂದನೇ ವಾರ್ಡ್‌ನ ಅಭ್ಯರ್ಥಿ ಪೃಥ್ವಿಕುಮಾರಿ, ಕಾಂಗ್ರೆಸ್ ಮುಖಂಡರಾದ ತಮ್ಮೇಗೌಡ ಎ.ವಿ.ಹಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಎಲೇಕೇರಿ ನಾಗರಾಜು, ಪಿ.ಡಿ.ರಾಜು, ಮಲ್ಲೇಶ್, ಮೈಲನಾಯ್ಕನ ಹೊಸಹಳ್ಳಿ ರಮೇಶ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.