ವಿದ್ಯಾರ್ಥಿಗಳಲ್ಲಿ ಕಲಿಯಬೇಕೆಂಬ ಇಚ್ಛಾಶಕ್ತಿ ಅಗತ್ಯ : ಶಿವಾಚಾರ್ಯ ಸ್ವಾಮೀಜಿ
ನೆಲಮಂಗಲ: ವಿದ್ಯಾರ್ಥಿಗಳಲ್ಲಿ ಕಲಿಯಬೇಕೆಂಬ ಇಚ್ಛಾಶಕ್ತಿ ಇರಬೇಕು. ತಮ್ಮ ಉದ್ದೇಶ ಹಾಗೂ ಗುರಿ ಮುಟ್ಟಲು ಏಕಾಗ್ರತೆ ಮತ್ತು ಛಲ ಮುಖ್ಯವಾಗುತ್ತದೆ. ಯಾವುದೇ ಕಾರಣಕ್ಕೂ ತಾವು ಸೋಮಾರಿಗಳಾಗದೆ ಸದಾ ಅಧ್ಯಯನ ಶೀಲರಾಗಿ ಮುನ್ನುಗ್ಗುವ ಸಾಹಸ ಮಾಡಿ ಎಂದು ಮೇಲಣಗವಿ ಮಠದ ಶ್ರೀ ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಅವರು ಭಾನುವಾರ ತಾಲೂಕಿನ ಹೊನ್ನೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಭವ್ಯಭಾರತದ ಸತ್ಪ್ರಜೆಗಳು. ಈ ಮಕ್ಕಳಲ್ಲಿ ಸ್ವಾಭಿಮಾನ, ದೇಶಾಭಿಮಾನ ಮತ್ತು ಸೇವಾ ಭಾವನೆಯನ್ನು ಬೆಳೆಸಿ ದೇಶದ ಅಭಿವೃದ್ಧಿಗೆ ತೊಡಗಿಸಿಕೊಳ್ಳುವಂತೆ ಮಾಡಿದಾಗ ಶಿಕ್ಷಣದ ಮಹತ್ವ ಸಾರ್ಥಕವಾಗುತ್ತದೆ. ಈ ಮಹಾತ್ ಸಾಧನೆಗೆ ಪೋಷಕರು, ಸಮಾಜ ಹಾಗೂ ಶಿಕ್ಷಕರಲ್ಲಿ ಸಂಬಂಧಗಳು ಉತ್ತಮವಾಗಿದ್ದಾಗ ನಮ್ಮ ಉದ್ದೇಶ ನೆರವೇರುತ್ತದೆ ಎಂದರು.
ಶಿವಗಂಗೆಯ ಹೊನ್ನಮ್ಮ ಗವಿಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಮಧ್ಯಮ ಮತ್ತು ತೀರಾ ಹಿಂದುಳಿದ ವರ್ಗದ ಮಕ್ಕಳೆ ಹೆಚ್ಚು ವ್ಯಾಸಂಗ ಮಾಡುತ್ತಿದ್ದು, ಈ ಮಕ್ಕಳ ಪೋಷಕರು ಹೆಚ್ಚಿನ ಕಾಳಜಿ ಹೊಂದಿ ಮಗುವಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ನಗರ ಪ್ರದೇಶದಲ್ಲಿನ ಮಕ್ಕಳಿಗೆ ಸರಿಸಾಟಿಯಾಗಬಲ್ಲರು. ಗ್ರಾಮೀಣ ಜನರಲ್ಲಿಯೂ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದು ವಿಷಾದನೀಯ ಎಂದರು.ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಪ್ರತಿಭಾವಂತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಜಗದೀಶ್ ಚೌಧರಿ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀ ರಂಗರಾಜು, ಶಿಕ್ಷಕ ಹೊನ್ನಶಾಮಯ್ಯ,ದಾಬಸ್ಪೇಟೆ ವಿಜಯಬ್ಯಾಂಕ್ ಮ್ಯಾನೇಜರ್ ಕುಮಾರ್ಕೇಶವ್, ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಪರಮಶಿವಯ್ಯ, ಸೇವ್ಯಾನಾಯ್ಕ, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶಾರದಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

