ಈ ಬಾರಿ ಮಾಗಡಿ ಪುರಸಭೆಗೆ ಕಾಂಗ್ರೆಸ್ ನೇತೃತ್ವ: ರೇವಣ್ಣ
ಮಾಗಡಿ: ಈ ಬಾರಿ ಮಾಗಡಿ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ನಡೆಸಲಿದೆ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಪಟ್ಟಣದ ವಿವಿಧಡೆ ಪಾದಯಾತ್ರೆ ನಡೆಸುತ್ತಾ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ಇಲ್ಲಿನ ಪರಸಭೆಯ 23 ವಾರ್ಡ್ಗಳಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದು,ಬಹುತೇಕ ಎಲ್ಲಾ ಅಭ್ಯರ್ಥಿಗಳು ಜನಪರ ಕಾಳಜಿ ವಹಿಸಿದ್ದಾರೆ. ಚುನಾವಣೆ ಪ್ರಚಾರ ಬಿರುಸಿನಿಂದ ನಡೆಸುತ್ತಿದ್ದೇವೆ. ಈಗಾಗಲೇ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ಜೆಡಿಎಸ್ ನಾಯಕರ ಅವ್ಯವಹಾರವನ್ನು ಕಣ್ಣಾರೆ ಕಂಡಿರುವ ಮತದಾರರು ಈ ಬಾರಿ ಕಾಂಗ್ರೆಸ್ ಪರವಾಗಿಮತ ನೀಡಲಿದ್ದಾರೆ ಎಂದರು.
ಕಳೆದ 5 ವರ್ಷಗಳ ಕಾಲ ಪುರಸಭೆಯ ಅಧಿಕಾರ ಹಿಡಿದಿದ್ದ ನಾಯಕರ ಅವ್ಯವಹಾರದ ಕಥೆ ತಾಲೂಕು ಸೇರಿದಂತೆ ನಾಡಿನಾದ್ಯಂತ ಜನಮನ ತಲುಪಿದೆ.
ಮತ್ತೆ ಯಾವುದೇ ಕಾರಣಕ್ಕೂ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಬೇಡ ಎಂದು ಮತದಾರರೇ ತೀರ್ಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎ.ಮಂಜು ತಿಳಿಸಿದರು. ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಎಚ್.ಎಂ.ಕೃಷ್ಣಮೂರ್ತಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ವಿವಿಧ ವಾರ್ಡ್ಗಳಲ್ಲಿ ಪಾದಯಾತ್ರೆ ಕೈಗೊಂಡು ಮತಯಾಚಿಸಿದರು.
ಪುರಸಭೆಯ ಚುನಾವಣೆ ಕಣದಿಂದ ಹಿಂದೆ ಸರಿದ ಎಚ್.ಜಿ. ವೆಂಕಟೇಶ ಬಾಬು, ಜಗದೀಶ್, ಗೋವಿಂದರಾಜು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

