ಖಾಸಗಿ ವಿಶ್ವ ವಿದ್ಯಾಲಯ ಆರಂಭಕ್ಕೆ ವಿರೋಧ
ಕ.ಪ್ರ. ವಾರ್ತೆ ಟಿ ರಾಮನಗರ ಟಿ ಮಾ.4
22 ಖಾಸಗಿ ವಿಶ್ವ ವಿದ್ಯಾಲಯವನ್ನು ಪ್ರಾರಂಭಿಸಲು ಅನುಮತಿ ನೀಡಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಖಾಸಗಿ ವಿಶ್ವ ವಿದ್ಯಾಲಯ ವಿಧೇಯಕವನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ನೀಡಿದೆ. ಆ ಮೂಲಕ ಖಾಸಗಿ ವಿವಿಗಳು ನಡೆಸುವ ಶೈಕ್ಷಣಿಕ ವ್ಯಾಪಾರಕ್ಕೆ ಸರ್ಕಾರ ಸಹಕಾರ ನೀಡಿದಂತಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಆತಂಕ: ಯಾವುದೇ ಮಾರ್ಗದರ್ಶಿ ಸೂತ್ರಗಳನ್ನು ಪಾಲನೆ ಮಾಡದೆ ಬೆಂಗಳೂರು ನಗರ ಒಂದರಲ್ಲೇ 22 ಖಾಸಗಿ ವಿವಿಗಳಿಗೆ ಅನುಮತಿ ನೀಡಿರುವ ಬಿಜೆಪಿ ಸರ್ಕಾರದ ನಡೆ ಅನುಮಾನಾಸ್ಪದವಾಗಿದ್ದು, ಇದರ ಹಿಂದೆ ಭಾರಿ ಭ್ರಷ್ಟಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶ್ವ ವಿದ್ಯಾಲಯಗಳು ಭ್ರಷ್ಟಾಚಾರದ ಕೂಪವಾಗಿದ್ದು, ಕುಲಪತಿಗಳ ನೇಮಕಾತಿಯಲ್ಲೂ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿವೆ.
ರಾಜಭವನದಲ್ಲೇ ಕೋಟ್ಯಂತರ ರು.ಗಳ ವ್ಯವಹಾರ ನಡೆಯುತ್ತಿದೆ. ರಾಜ್ಯದ ಒಬ್ಬ ಪ್ರತಿಭಾವಂತ, ಶಿಕ್ಷಣತಜ್ಞ ಹಾಗೂ ಪ್ರಾಮಾಣಿಕ ವ್ಯಕ್ತಿ ಕುಲಪತಿಯಾಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಭ್ರಷ್ಟ ಕುಲಪತಿಗಳನ್ನು ರಾಜ್ಯಪಾಲರೇ ರಕ್ಷಿಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ಸಾಕ್ಷಿಗಳಿವೆ ಎಂದರು. ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳು ತನಿಖೆಗೆ ಆದೇಶಿಸಬೇಕು. ಮಹಿಳಾ ವಿವಿಯ ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖಾ ವರದಿಯನ್ನು ಬಹಿರಂಗ ಪಡಿಸಬೇಕು. ರಾಜೀವ್ಗಾಂಧಿ ಆರೋಗ್ಯ ವಿವಿಯ ವಿಶ್ರಾಂತ ಕುಲಪತಿ ಡಾ.ಎಸ್.ಪ್ರಭಾಕರನ್ ಕುರಿತಂತೆ ಸಿಬಿಐನ ತನಿಖಾ ವರದಿಯನ್ನು ಬಹಿರಂಗಪಡಸಿಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಂಚಾಲಕ ಸುನಿಲ್ಣಕುಮಾರ್, ಪ್ರಮುಖರಾದ ವಿಜಯ್ಕುಮಾರ್, ಅನಿಲ್ಬಾಬು, ಕಾವ್ಯಶ್ರೀ, ಶೃತಿ, ರೋಜಾ, ಶ್ವೇತಾ, ಸುಮಾ ಮತ್ತಿತರರು ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

