ರಾಜ್ಯ ಮಟ್ಟದ ರಸ್ತೆ ಓಟ ಸ್ಪರ್ಧೆ
ಮಾಗಡಿ: ಜಿಲ್ಲಾ ಹಿರಿಯರ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಹಿರಿಯ ಪುರುಷ ಮತ್ತು ಮಹಿಳೆಯರ ರಾಜ್ಯ ಮಟ್ಟದ ರಸ್ತೆ ಓಟ ಸ್ಪರ್ಧೆ ಮಾ.17 ರಂದು ಬೆಳಿಗ್ಗೆ 6.30 ಕ್ಕೆ ಮಾಗಡಿ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ತಿಳಿಸಿದ್ದಾರೆ. ಆಸಕ್ತ ಕ್ರೀಡಾಪಟುಗಳು ಮಾ.16 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಎಚ್.ಜಿ. ತಿಮ್ಮೇಗೌಡ ಮೊ.9886348767 ಸಂಪರ್ಕಿಸುವಂತೆ ಕೋರಲಾಗಿದೆ.
ವ್ಯಕ್ತಿ ಬೆಳವಣಿಗೆಗೆ ಶಿಕ್ಷಣ ಅಡಿಪಾಯ
ಸೂಲಿಬೆಲೆ: ಮನುಷ್ಯರನ್ನು ಮನುಷ್ಯರಾಗಿ ರೂಪಿಸಲು ಪ್ರಾಥಮಿಕ ಶಿಕ್ಷಣದ ಅಡಿಪಾಯ ಬಹುಮುಖ್ಯವಾಗಿರುತ್ತದೆ. ಸದೃಢ ಸಮಾಜ ನಿರ್ಮಾಣಕ್ಕೆ ಗುಣಾತ್ಮಕ ಶಿಕ್ಷಣ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಸೂಲಿಬೆಲೆ ಪೊಲೀಸ್ ಠಾಣೆ ಪಿಎಸ್ಐ ಬಿ. ರಾಜಣ್ಣ ತಿಳಿಸಿದ್ದಾರೆ.
ಸೂಲಿಬೆಲೆ ಸಮೀಪದ ಚಿಕ್ಕಅರಳಿಗೆರೆಯಲ್ಲಿ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ ಮಾತನಾಡಿ, ಆದರ್ಶಗಳನ್ನು ರೂಪಿಸುವಂಥ ಶಿಕ್ಷಣ ಇಂದಿನ ಸಮಾಜಕ್ಕೆ ಅಗತ್ಯವಾಗಿದೆ ಎಂದರು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಎನ್. ಗೋಪಾಲಗೌಡ ಮಾತನಾಡಿದರು. ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಯುವರಾಜ್, ಸುಬ್ರಾಯ್ ಸೇಠ್, ಪ್ರಸಾದ್, ದೇವರಾಜ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಜಲಜಾಕ್ಷಿ ದೇವರಾಜ್, ಬಿ.ವಿ. ರಾಜಶೇಖರ್ ಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ. ಸತೀಶ್ ಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಟಿ.ಸಿ. ವೆಂಕಟೇಗೌಡ, ಆರ್.ಮುನಿರಾಜು ಸೇರಿದಂತೆ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

