ಮತದಾನಕ್ಕೆ ಕ್ಷಣಗಣನೆ ಆರಂಭ
ಕ.ಪ್ರ. ವಾರ್ತೆ ಟಿ ಮಾಗಡಿ ಟಿ ಮಾ.6
ಸ್ಥಳೀಯ ಪುರಸಭೆಯ ಮಿನಿ ಸಮರ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ತಾಲೂಕು ಆಡಳಿತ ಸಕಲ ಸಿದ್ಧತೆ ನಡೆಸಿದೆ. ಆಯಾ ಮತಗಟ್ಟೆ ಕೇಂದ್ರಕ್ಕೆ ಈಗಾಗಲೇ ಅಧಿಕಾರಿಗಳು ತೆರಳಿದ್ದಾರೆ. ಗುರುವಾಗ ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಳ್ಳುವ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಶಾಂತಿಯುತ ಮತದಾನಕ್ಕೆ ಈಗಾಗಲೇ ತಾಲೂಕು ಆಡಳಿತ ಮುನ್ನಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ತಹಸೀಲ್ದಾರ್ ಡಾ.ಬಿ.ಆರ್. ಹರೀಶ್ ನಾಯಕ್ ತಿಳಿಸಿದ್ದಾರೆ.
ಕಾನೂನು ಸುವ್ಯವಸೆ:್ಥ ಶಾಂತಿಯುತ ಮತದಾನಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜನೆಗೊಂಡಿರುವ ಪೊಲೀಸರು ಆಯಾ ಮತಗಟ್ಟೆ ಕೇಂದ್ರಗಳಲ್ಲಿ ಬೀಡು ಬಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಕ್ರಮ ವಹಿಸಿರುವುದಾಗಿ ಸಿಪಿಐ ಯು.ಡಿ. ಕೃಷಕುಮಾರ್ ತಿಳಿಸಿದ್ದಾರೆ.
ರೂಟ್ ಅಧಿಕಾರಿಗಳು: ಮೂರು ರೂಟ್ಗಳಲ್ಲಿ ಸಂಚರಿಸಲು ರೂಟ್ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. 1ನೇ ವಾರ್ಡ್ನಿಂದ 8 ವರೆಗೆ, 9 ನೇ ವಾರ್ಡ್ ನಿಂದ 16 ರವೆರೆಗೆ ಮತ್ತು 17 ನೇ ವಾರ್ಡ್ನಿಂದ 23 ವಾರ್ಡ್ಗಳ ಮತಗಟ್ಟೆ ಕೇಂದ್ರಗಳಿಗೆ ರೂಟ್ ಅಧಿಕಾರಿಗಳ ತಂಡಗಳನ್ನು ರಚಿಸಿ ನಿಯೋಜಿಸಲಾಗಿದೆ. ಈ ಸಂಬಂಧ ಎಂ.ಸಿ.ಸಿ ಅಧಿಕಾರಿ ತಿಮ್ಮಪ್ಪ ನಿಗಾ ನಿರ್ವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

