50000 ಕೋಟಿ ದುರುಪಯೋಗ ತನಿಖೆಯಾಗಲಿ
ಕನ್ನಡಪ್ರಭ ವಾರ್ತೆ ರಾಮನಗರ ಮಾ.8
ಕೇಂದ್ರ ಸರ್ಕಾರದಿಂದ ಘೋಷಣೆಯಾಗಿದ್ದ ರೈತರ ಸಾಲ ಮನ್ನಾ ಯೋಜನೆಯಲ್ಲಿ 50000 ಕೋಟಿಯಷ್ಟು ಮೊತ್ತದ ದುರುಪಯೋಗ ಕುರಿತು ಉನ್ನತ ತನಿಖೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕಾರ್ಪೋರೇಷನ್ ಬ್ಯಾಂಕಿನ ಎದುರು ಕೆಲ ಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಬ್ಯಾಂಕಿಂಗ್ ವ್ಯವಸ್ಥೆ ಮತ್ತು ಹಗರಣದ ರೂವಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಸದರಿ ಬ್ಯಾಂಕ್ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ರೈತರ ಆತ್ಮಹತ್ಯೆ ತಡೆಗೆ ಕೇಂದ್ರವು 2008 ರಲ್ಲಿ ಸಾಲ ಮನ್ನಾ ಯೋಜನೆ ಜಾರಿಗೊಳಿಸಿತ್ತು. 75000 ಕೋಟಿ ಪೈಕಿ 50000 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿದೆ. ರೈತ ಸಾಲ ಮನ್ನಾ ದುರುಪಯೋಗವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರುಪಡಿಸಬೇಕು ಎಂದು ಆಗ್ರಹಿಸಿದರು.
ರೈತರೇ ಬೆನ್ನೆಲುಬು ಎನಿಸಿರುವ ನಮ್ಮ ದೇಶದಲ್ಲಿ ರೈತರ ಹೆಸರಿನಲ್ಲೂ ಹಣ ಲೂಟಿ ನಡೆದಿರುವುದು ದೊಡ್ಡ ಕಳಂಕವಾಗಿದೆ. ಈ ಪ್ರಕರಣವನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು. ತಪ್ಪಿತಸ್ಥರನ್ನು ಪತ್ತೆಹಚ್ಚಿ, ಶಿಕ್ಷೆಗೆ ಗುರಿಪಡಿಸಬೆಕು ಎಂದು ಒತ್ತಾಯಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರಿಂದ ಲೂಟಿ ಹಣ ವಸೂಲು ಮಾಡಬೇಕು. ಈ ವಿಷಯವಾಗಿ ದೆಹಲಿಯಲ್ಲಿ ಮಾ.18 ರಂದು ರೈತರ ಬೃಹತ್ ಸಮಾವೇಶ ನಡೆಯಲಿದೆ. ಜಿಲ್ಲೆಯಿಂದಲೂ ಹೆಚ್ಚು ಸಂಖ್ಯೆಯ ರೈತರು ಪಾಲ್ಗೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖಂಡರು ತಿಳಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು, ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ, ಕೆ.ಎನ್.ರಾಜು, ರಾಮಕೃಷಪ್ಪ, ಸಿ.ಎಸ್. ಶಿವಕುಮಾರ್, ಕೃಷಪ್ಪ, ಜೋಗಪ್ಪ, ಚಿಕ್ಕಬೈರೇಗೌಡ, ವಾಸು, ಪುಟ್ಟಸ್ವಾಮಯ್ಯ, ತಿಮ್ಮೇಗೌಡ, ಎಚ್.ಸಿ. ಕೃಷಯ್ಯ, ಸಿದ್ಧೇಗೌಡ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

