ಮತ ಎಣಿಕೆ ಸಿಬ್ಬಂದಿ ಸಕಾಲಕ್ಕೆ ಆಗಮಿಸಲಿ: ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ
ಕಪ್ರ ವಾರ್ತೆ ್ಣ ರಾಮನಗರ ್ಣ ಮಾ.9: ಪೌರ ಸಂಸ್ಥೆಗಳ ಚುನಾವಣೆಯ ಮತ ಎಣಿಕೆಗೆ ನಿಯೋಜಿತರಾಗಿರುವ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಸೂಚನೆ ನೀಡಿದರು. ಮತ ಎಣಿಕೆ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾ.11 ರಂದು ಬೆಳಗ್ಗೆ 8ಕ್ಕೆ ಎಣಿಕೆ ಪ್ರಾರಂಭವಾಗಲಿದೆ. ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು. ಮಾಧ್ಯಮ ಕೇಂದ್ರ ತೆರೆದು, ಟಿವಿ ವ್ಯವಸ್ಥೆಯೊಂದಿಗೆ ಪ್ರತಿ ಕ್ಷಣದ ಫಲಿತಾಂಶವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ರಾಮನಗರ ಉಪ ವಿಭಾಗದ ವಿಶೇಷ ಭೂಸ್ವಾಧೀನಾಧಿಕಾರಿ ಜೆ.ಮಾಧವ ಅವರು ಮತ ಎಣಿಕೆ ವಿವರ ನೀಡಿದರು. ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಉಪ ವಿಭಾಗಾಧಿಕಾರಿ ಡಾ.ಸ್ನೇಹ, ತಹಸೀಲ್ದಾರ್, ಚುನಾವಣಾಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

