ಬೆಂಗಳೂರು ಗ್ರಾಮಾಂತರ

ವಿವೇಕಾನಂದ ವಿದ್ಯಾಕೇಂದ್ರದ ಶಾಲಾ ವಾರ್ಷಿಕೋತ್ಸವ

Published On :

ಕ.ಪ್ರ.ವಾರ್ತೆ ಹೊಸಕೋಟೆ ಮಾ.10
ಪಟ್ಟಣದ ಶ್ರೀ ವಿವೇಕಾನಂದ ವಿದ್ಯಾಕೇಂದ್ರದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಸಚಿವ ಬಿ.ಎನ್. ಬಚ್ಚೇಗೌಡ ಉದ್ಘಾಟಿಸಿದರು.
ನಂತರ ಮಾತನಾಡಿ ಯುವಕರು ಸೂಕ್ತ ಮಾರ್ಗದರ್ಶನದ ಕೊರತೆಯಿಂದಾಗಿ ದುಶ್ಚಟಗಳಿಗೆ ಬಲಿಯಾಗಿ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗುತ್ತಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.
ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಾದದ್ದು ಅತ್ಯಾವಶ್ಯಕ, ಶಿಕ್ಷಕರು ನೈತಿಕ ಜವಾಬ್ದಾರಿ ಅರಿತು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಶಿಸಿ ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದೆ. ಈ ದಿಶೆಯಲ್ಲಿ ವಿವೇಕಾನಂದ ವಿದ್ಯಾಕೇಂದ್ರ ಶಿಕ್ಷಣದೊಂದಿಗೆ ರಾಷ್ಟ್ರಾಭಿಮಾನ, ನಾಡಿನ ಕಲೆ, ಸಂಸ್ಕೃತಿಯ ಬಗ್ಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಉಪಯುಕ್ತ ಚಟುವಟಿಕೆಗಳನ್ನು ಹಮ್ಮಿಕೊಂಡು ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿಸಿದೆ ಎಂದರು.
ಮಕ್ಕಳಿಂದ ಮನೋರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಬಿಮ್‌ಎಮ್‌ಆರ್‌ಡಿ ಅಧ್ಯಕ್ಷ ಸಿ ಜಯರಾಜ್, ಶಾಲೆಯ ಕಾರ್ಯದರ್ಶಿ ನಾಗರಾಜ ಗುಪ್ತ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.