ಬೆಂಗಳೂರು ಗ್ರಾಮಾಂತರ

ಗ್ರಾಮಾಂತರ ಜಿಲ್ಲೆಯ 30 ಕಡೆ ರಾಷ್ಟ್ರ ಭಕ್ತಿಯ ಶೈಕ್ಷಣಿಕ ಜಾಗೃತಿ

Published On :

ಸೂಲಿಬೆಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ 30 ಸರ್ಕಾರಿ ಉರ್ದು ಶಾಲೆಗಳಲ್ಲಿ ರಾಷ್ಟ್ರ ಭಕ್ತಿಗೀತೆಗಳ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶನಿವಾರ ಸೂಲಿಬೆಲೆ ಹೋಬಳಿಯ ತಮ್ಮರಸನಹಳ್ಳಿ ಸರ್ಕಾರಿ ಶಾಲೆಯಲ್ಲಿ ಉದ್ಘಾಟಿಸಲಾಯಿತು.
ಸರ್ಕಾರಿ ಉರ್ದು ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದ ತಾಪಂ ಸದಸ್ಯೆ ಮಂಜುಳಾ ಡಿ.ಟಿ. ವೆಂಕಟೇಶ್, ಗ್ರಾಮಾಂತರ ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಲ್ಲಿನ ಮಕ್ಕಳಲ್ಲಿ ರಾಷ್ಟ್ರ ಪ್ರೇಮವನ್ನು ಮೂಡಿಸಿ ಶಾಲೆಗಳತ್ತ ಧಾವಿಸುವಂತೆ ಮಾಡಲು ಕರ್ನಾಟಕ ಉರ್ದು ಅಕಾಡಮಿವತಿಯಿಂದ ಜಿಲ್ಲೆಯ 30 ಕಡೆ ಜಾಗೃತಿ ಕಾರ್ಯಕ್ರಮ ನಡೆಸಲು ಇಲಾಖೆ ಆದೇಶ ನೀಡಿದೆ. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂಥ ಕಾರ್ಯಗಳ ಮಹತ್ವವನ್ನು ಪಡೆದುಕೊಂಡಿವೆ ಎಂದರು.
ಜಯಕರ್ನಾಟಕ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಅಮ್ಜದ್ ಮಾತನಾಡಿದರು.ಮುಖ್ಯ ಶಿಕ್ಷಕಿ ಜಯಬುನ್ನಿಸಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಲ್ಲಾಭಕ್ಷು, ಉಪಾಧ್ಯಕ್ಷ ಮಸೂದ್, ಮುಜಾಯಿದ್ ಪಾಷ, ಸೈಯದ್ ಭಕ್ಷು, ನಾಸಿರ್ ಬೇಗ್, ಯಶೋಧ ಹಲವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.