ಬಡ ಜನರಿಗಾಗಿ ಬಿಜಿಎಸ್ ಜನರಲ್ ಆಸ್ಪತ್ರೆ: ಮೋಹನ್
ರಾಮನಗರ: ಡಾ.ಬಾಲಗಂಗಾಧರನಾಥ ಸ್ವಾಮೀಜಿ ಆಶಯದಂತೆ ಗ್ರಾಮೀಣ ಪ್ರದೇಶದ ಜನತೆಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸುವ ಉದ್ದೇಶದಿಂದ ಬಿಜಿಎಸ್ ಗ್ಲೋಬಲ್ ವೈದ್ಯಕೀಯ ಮಹಾವಿದ್ಯಾಯಲದಿಂದ ಸಾರ್ವಜನಿಕ ಆಸ್ಪತ್ರೆ ಪ್ರಾರಂಭಿಸಲಾಗುತ್ತಿದೆ ಎಂದು ಬಿಜಿಎಸ್ ಹೆಲ್ತ್ ಅಂಡ್ ಎಜುಕೇಷನ್ ಸಮಿತಿ ಪ್ರಾಂಶುಪಾಲ ಡಾ.ಎಂ.ಇ.ಮೋಹನ್ ತಿಳಿಸಿದ್ದಾರೆ.
ಬಿಡದಿ ಬಳಿಯ ಬಾನಂದೂರು ಗ್ರಾಮದಲ್ಲಿ ಮಂಗಳವಾರ ನಡೆದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬಿಜಿಎಸ್ ದುಬಾರಿ ಆಸ್ಪತ್ರೆ, ಬಡಜನರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ ಎಂಬ ದೂರು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಬಡ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಜನರಲ್ ಆಸ್ಪತ್ರೆ ಆರಂಭಿಸಲಾಗುತ್ತಿದೆ ಎಂದರು.
ಗ್ರಾಮೀಣ ಪ್ರದೇಶದ ಬಡಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಾನಂದೂರಿನಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಯಲ್ಲೂ ಬಿಜಿಎಸ್ ಮಹಾವಿದ್ಯಾಲಯದಿಂದ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಶೇಕಡಾ 70ರಷ್ಟು ಜನರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ದೊರೆಯುತ್ತಿಲ್ಲ.ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೀಟರ್ ತಿಳಿಸಿದರು.
ಶಿಬಿರದಲ್ಲಿ ಹೃದ್ರೋಗ, ನರರೋಗ, ಮೂತ್ರಪಿಂಡ, ಮೂತ್ರಾಂಗಗಳಲ್ಲಿ ಕಲ್ಲು, ಸಕ್ಕರೆ ರೋಗ, ಕಿವಿ, ಮೂಗು, ಗಂಟಲು, ಚರ್ಮರೋಗ, ದಂತ, ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿ, ಉಚಿತ ಔಷಧಿ ವಿತರಿಸಲಾಯಿತು. ಆದಿಚುಂಚನಗಿರಿ ಮಹಾ ಸಂಸ್ಥಾನದ ಬಾನಂದೂರು ಶಾಖಾ ಮಠದ ಮುಖ್ಯಸ್ಥ ಗುರುನಾಥ ಸ್ವಾಮೀಜಿ, ಶಾಲೆಯ ಪ್ರಾಂಶುಪಾಲ ಬಸವರಾಜ್ ಜವಳಿ, ಡಾ.ಬಾಲಚಂದ್ರ, ಡಾ.ರಾಮಚಂದ್ರ, ಡಾ.ರಾಜೇಶ್, ಡಾ.ವಿಲಾಸ್, ಬಿ.ಎನ್.ಗಂಗಾಧರಯ್ಯ, ಮುಖಂಡರಾದ ಕೇಶವಮೂರ್ತಿ, ಕುಮಾರ್, ಗಂಗಾಧರಯ್ಯ, ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

