ಬೆಂಗಳೂರು ಗ್ರಾಮಾಂತರ

13 ಕೇಂದ್ರ, 9534 ವಿದ್ಯಾರ್ಥಿಗಳು: ಇಂದಿನಿಂದ ಪಿಯು ಪರೀಕ್ಷೆ

Published On :

ಕನ್ನಡಪ್ರಭ ವಾರ್ತೆ ರಾಮನಗರ ಮಾ.12:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.13 ರಿಂದ ಪ್ರಾರಂಭವಾಗಲಿದೆ. ಜಿಲ್ಲೆಯ 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 4649 ಬಾಲಕರು ಮತ್ತು 4885 ಬಾಲಕಿಯರು ಸೇರಿದಂತೆ 9534 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಲಾ ವಿಭಾಗದ 4414, ವಾಣಿಜ್ಯ ವಿಭಾಗದಲ್ಲಿ 3090 ಹಾಗೂ ವಿಜ್ಞಾನ ವಿಭಾಗದ 2030 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 7555 ಹೊಸ ವಿದ್ಯಾರ್ಥಿಗಳು. 1554 ಮಂದಿ ಪುನರಾವರ್ತಿತರು, 425 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. ರಾಮನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಐಜೂರಿನಲ್ಲಿರುವ ಬಿ.ಎ.ಎಸ್.ವಿ.ಪಿ. ಪದವಿ ಪೂರ್ವ ಕಾಲೇಜು, ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.  ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾರ್ವಜನಿಕ ಪದವಿ ಪೂರ್ವ ಕಾಲೇಜು, ಕನಕಪುರದ ರೂರಲ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಜಿ ಪುರಸಭೆ ಕಾಲೇಜು, ಜಕ್ಕಸಂದ್ರದಲ್ಲಿರುವ ಜೈನ್ ವಿದ್ಯಾನಿಕೇತನದಲ್ಲಿ ಪರೀಕ್ಷೆ ನಡೆಯಲಿದೆ.  ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಪ್ರತಿ ಪರೀಕ್ಷೆ ಅವಧಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.
ಜಾಗೃತಿ ದಳ ರಚನೆ: ಪ್ರತಿ ತಾಲೂಕಿನಲ್ಲೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಜಾಗೃತ ದಳವನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿ ತಾಲೂಕಿಗೆ ಒಂದು ಜಾಗೃತ ದಳವನ್ನು ಹಿರಿಯ ಪ್ರಾಚಾರ್ಯರ ನೇತೃತ್ವದಲ್ಲಿ ನೇಮಿಸಿದೆ.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಸಿಟ್ಟಿಂಗ್ ಸ್ಕ್ವಾಡ್‌ಗಳನ್ನು ನೇಮಿಸಿದ್ದು, ಅವರು ಬೇರೆ ಜಿಲ್ಲೆಯವರಾಗಿರುತ್ತಾರೆ. ಪ್ರತಿ ಕೇಂದ್ರಕ್ಕೆ ಒಬ್ಬರು ಆರೋಗ್ಯ ಸಹಾಯಕಿರನ್ನು ನೇಮಿಸಲಾಗಿದೆ ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ತಿಳಿಸಿದ್ದಾರೆ.   
ಪರೀಕ್ಷಾ ವೇಳಾಪಟ್ಟಿ: ಮಾ.13 ರಂದು ಇತಿಹಾಸ, ಗಣಕ ವಿಜ್ಞಾನ, ಮಾ.14 ರಂದು ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಮಾ.15 ರಂದು ಅರ್ಥಶಾಸ್ತ್ರ, ಭೂಗರ್ಭ ಶಾಸ್ತ್ರ, ಮಾ.16 ರಂದು ಐಚ್ಚಿಕ ಕನ್ನಡ, ಗೃಹ ವಿಜ್ಞಾನ,
ಬೇಸಿಕ್‌ಮ್ಯಾಥ್ಸ್, ಮಾ.18 ರಂದು ಗಣಿತ, ಭೂಗೋಳಶಾಸ್ತ್ರ, ಮಾ.19 ರಂದು ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಮಾ.20 ರಂದು ಭೌತಶಾಸ್ತ್ರ, ಮನಃಶಾಸ್ತ್ರ, ಮಾ.21 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.22 ರಂದು ತರ್ಕಶಾಸ್ತ್ರ, ಶಿಕ್ಷಣ, ಮಾ.23 ರಂದು ರಸಾಯನಶಾಸ್ತ್ರ, ಬಿಸಿನೆಸ್ ಸ್ಟಡೀಸ್, ಮಾ.25 ರಂದು ಇಂಗ್ಲಿಷ್, ಮಾ.26 ರಂದು ಮರಾಠಿ, ಉರ್ದು, ಮಾ.27 ರಂದು ಕನ್ನಡ, ತಮಿಳು, ಮಳಯಾಳಂ, ಅರೇಬಿಕ್,  ಮಾ.28 ರಂದು ಹಿಂದಿ, ತೆಲುಗು, ಸಂಸ್ಕೃತ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಬೆಳಗ್ಗೆ 9 ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದೆ.  
ಮಾ.20 ರಂದು ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾ.27 ರಂದು ಫ್ರೆಂಚ್ ಭಾಷೆ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5.15ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ವಿವರಿಸಿದ್ದಾರೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.