ಪರೀಕ್ಷಾ ಫಲಿತಾಂಶ ಪ್ರಕಟ
ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತು 1012-13ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅಂತರ್ಜಾಲದಲ್ಲೂ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಕೋ.ವೆಂ.ರಾಮಕೃಷ್ಣೇಗೌಡ ಅವರನ್ನು ಸಂಪರ್ಕಿಸಬಹುದು. (ದೂ.26623584).
ಲೋಕಾಯುಕ್ತ ಡಿವೈಎಸ್‌ಪಿರಿಂದ ದೂರು ಸ್ವೀಕಾರ
ರಾಮನಗರ: ಜಿಲ್ಲೆಯ ಲೋಕಾಯುಕ್ತ ಡಿವೈಎಸ್‌ಪಿ ಮಾ.15 ರಂದು ಚನ್ನಪಟ್ಟಣದ ದೊಡ್ಡಮಳೂರಿನ ನಾಡ ಕಚೇರಿಯಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು. ತಾಲೂಕಿನ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣ ಕೇಳಿದ್ದಲ್ಲಿ ದೂರುಗಳನ್ನು ಖುದ್ದಾಗಿ ಸಲ್ಲಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

