ಬೆಂಗಳೂರು ಗ್ರಾಮಾಂತರ

ಆನಂದ ಸಿಂಧು ಸ್ತೋತ್ರ ಪಠನ

Published On :

ನೆಲಮಂಗಲ: ಪಟ್ಟಣದ ಗೋವಿಂದಪ್ಪ ಲೇಔಟ್‌ನ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ. 17ರ ಭಾನುವಾರ ಸಂಜೆ 4-00 ಗಂಟೆಗೆ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠದ ಪೀಠಾಧೀಶರಾದ ಶಂಕರಭಾರತಿ ಮಹಾಸ್ವಾಮಿಯವರ ಸಾನಿಧ್ಯದಲ್ಲಿ ಆನಂದ ಸಿಂಧು ಸ್ತೋತ್ರ ಪಠನ ಮಹಾಭಿಯಾನದ ಮಾರ್ಗದರ್ಶನ ಹಾಗೂ ಆಶೀರ್ವಚನ ಏರ್ಪಡಿಸಲಾಗಿದೆ. ಆಸ್ತಿಕ ಬಂಧುಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪರಮಪೂಜ್ಯರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಮಹಾಭಿಯಾನ ಸಮಿತಿಯ ಅಧ್ಯಕ್ಷ ಡಾ. ಪಿ.ಸದಾನಂದಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಧ್ವಜ ತಲೆಕೆಳಗು: ಬಚ್ಚರೆಡ್ಡಿಗೆ ಶಿಕ್ಷೆ ಪ್ರಕಟ
ಶಿಡ್ಲಘಟ್ಟ: ರಾಷ್ಟ್ರಧ್ವಜ ತಲೆ ಕೆಳಗಾಗಿ ಹಾರಿಸಿದ್ದ ಗ್ರಂಥಪಾಲಕ ಬಚ್ಚರೆಡ್ಡಿಗೆ ಇಲ್ಲಿನ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎಸ್.ಮಹೇಶ್ 6 ತಿಂಗಳ ಸಾದಾ ಸಜೆ ಮತ್ತು 5 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಾರ್ವಜನಿಕ ಗ್ರಂಥಾಲಯದ ಕಚೇರಿಯ ಮೇಲೆ 2010ರ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಿದ್ದ ಬಗ್ಗೆ ಕನ್ನಡ ಪ್ರಭದಲ್ಲಿ ಸುದ್ದಿ ಪ್ರಕಟವಾಗಿತ್ತು. ಗ್ರಂಥಾಲಯದ ಅಧಿಕಾರಿ ಬಚ್ಚರೆಡ್ಡಿ ವಿರುದ್ಧ ಪುರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.